ಪ್ರತಿ ವರ್ಷ ದತ್ತಪೀಠಕ್ಕೆ ಬರುವುದು ಅಲ್ಲಿ ಹೆಣ ಇಲ್ಲದ ಗೋರಿಗಳನ್ನು ನೋಡಿಕೊಂಡು ಹೋಗುವುದು, ನಮಗೆ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬಂದಿದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ನಮಗೆ ಎಚ್ಚರಿಕೆ ನೀಡಿ…ನೀಡಿ… ಬೇಜಾರಾಗಿದೆ. ಆಕ್ರೋಶವಾಗಿದೆ. ಧರ್ಮದ ವಿಚಾರದಲ್ಲಿ ಈ ಡ್ರಾಮಾ ಒಳ್ಳೆದಲ್ಲ. ಏನಾದರೂ ಆಗಲಿ ಎಂದು ದತ್ತಪೀಠದ ವಿಚಾರದಲ್ಲಿ ಸರ್ಕಾರ ತಕ್ಷಣ ಗಟ್ಟಿ ನಿರ್ಧಾರ ಮಾಡಲಿ.ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಅಲ್ಲಿ ಹಿಂದೂ ಅರ್ಚಕರ ನೇಮಿಸಬೇಕೆಂದು ಆಗ್ರಹಿಸಿದ್ದಾರೆ. ಇಂದಿನಿಂದ 7 ದಿನಗಳ ಕಾಲ ನಡೆಯುವ ದತ್ತಮಾಲಾ ಅಭಿಯಾನದ 13ನೇ ತಾರೀಖು ಕೊನೆಯಾಗಲಿದೆ. ಅಷ್ಟರೊಳಗೆ ಹಿಂದೂ ಅರ್ಚಕರ ನೇಮಿಸಬೇಕು. ಇಲ್ಲವಾದರೆ, ಪರಿಸ್ಥಿತಿ ಕಠಿಣವಾಗಲಿದೆ. ಅಲ್ಲಿ ಹಿಂದೂಗಳು ಹಾಗೂ ದತ್ತಭಕ್ತರಿಂದ ಅಲ್ಲಿ ಏನಾದರೂ ಅನಾಹುತವಾದರೆ ಸರ್ಕಾರವೇ ನೇರ ಹೊಣೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರವೂ ಅಲುಗಾಡುತ್ತೆ ಎಂದು ಎಚ್ಚರಿಸಿದ್ದಾರೆ. ಕಳೆದ ವರ್ಷ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪನವರ ಪೀಠ ಹೋಗುತ್ತೆ ಎಂದು ಹೇಳಿದ್ದೆವು.ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪನವರು ಪೀಠ ಕಳೆದುಕೊಂಡರು. ಈಗ ಬೊಮ್ಮಾಯಿಗೂ ಎಚ್ವರಿಕೆ ನೀಡುತ್ತಿದ್ದೇವೆ. ಮುಂದೆ ನಿಮ್ಮ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿ. ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದು ಸಿಎಂಗೂ ಭಾವನಾತ್ಮಕವಾಗಿ ಭಯಪಡಿಸಿದ್ದಾರೆ. ಶ್ರೀರಾಮ ಸೇನೆ ವತಿಯಿಂದ ನಡೆಯುತ್ತಿರುವ 18ನೇ ವರ್ಷದ ಈ ದತ್ತಮಾಲಾ ಅಭಿಯಾನ ಇದೇ 13ರಂದು ಕೊನೆಗೊಳ್ಳಲಿದೆ
Trending
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು