ALSO FEATURED IN

A national Florence Nightingale: ಜಿಲ್ಲೆಯ ಇಬ್ಬರಿಗೆ ‘ರಾಷ್ಟ್ರೀಯ ಫ್ಲಾರೆನ್ಸ್‌ ನೈಟಿಂಗೇಲ್‌’ ಪ್ರಶಸ್ತಿ

Spread the love

ಚಿಕ್ಕಮಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕಿ ಸಜೀದಾ ಬಾನು, ಚಿಕ್ಕಮಗಳೂರಿನ ನಿವೃತ್ತ ತಾಲ್ಲೂಕು ಆರೋಗ್ಯ ಮೇಲ್ವಿಚಾರಕಿ ಜಿ.ಎಸ್‌.ಕಾವೇರಿಗೆ 2021ನೇ ಸಾಲಿನ ‘ರಾಷ್ಟ್ರೀಯ ಫ್ಲಾರೆನ್ಸ್‌ ನೈಟಿಂಗೇಲ್‌’ ಪ್ರಶಸ್ತಿ ಪ್ರದಾನ ಮಾಡಿದರು.

ಕಾವೇರಿ ಅವರು ಸುಬ್ರಾಯ ಭಟ್ಟ ಮತ್ತು ಸೀತಮ್ಮ ದಂಪತಿಯ ಪುತ್ರಿ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ 1990ರಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಮೂಡಿಗೆರೆ ತಾಲ್ಲೂಕಿನ ಬಾಳೆಹೊಳೆ, ಎನ್‌.ಆರ್‌.ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಮಗಳೂರು ತಾಲ್ಲೂಕು ಆರೋಗ್ಯ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸಿ 2021ರಲ್ಲಿ ನಿವೃತ್ತರಾಗಿದ್ದಾರೆ. ತೇಗೂರಿನಲ್ಲಿ ನೆಲೆಸಿದ್ದಾರೆ.

‘ಕಾಯಕ ನಿಷ್ಠೆ, ಪರಿಶ್ರಮ ಗುರುತಿಸಿ ಪ್ರಶಸ್ತಿ ನೀಡಿರುವುದು ಬಹಳ ಖುಷಿಯಾಗಿದೆ. ಸಹೋದ್ಯೋಗಿಗಳು ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ರೋಗಿಗಳ ಸೇವೆ ಮಾಡಿದ ತೃಪ್ತಿ ಇದೆ. 32 ವರ್ಷಗಳ ವೃತ್ತಿ ಜೀವನ ಸಾರ್ಥಕ ಭಾವ ಮೂಡಿಸಿದೆ’ ಎಂದು ಕಾವೇರಿ ತಿಳಿಸಿದರು.

ಸಜೀದಾ ಅವರು ತರೀಕೆರೆಯ ಗುಲಾಂ ರಸೂಲ್‌ ಮತ್ತು ಖುತೇಜಾ ಬಾನು ದಂಪತಿ ಪುತ್ರಿ. 1986ರಲ್ಲಿ ಸೊಕ್ಕೆ ಗ್ರಾಮದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಮುಂಡ್ರೆ, ಕೆಂಚಾಪುರದಲ್ಲಿ ಕಾರ್ಯನಿರ್ವಹಿಸಿ, ಪ್ರಸ್ತುತ ಲಕ್ಕವಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

‘ರೋಗಿಗಳ ಶುಶ್ರೂಷೆಯಲ್ಲಿ ಸಾರ್ಥಕತೆ ಕಂಡಿದ್ದೇನೆ. ಜನರ ಆರೋಗ್ಯ ಸಂಕಷ್ಟಗಳಿಗೆ ಹಗಲಿರುಳು ಸ್ಪಂದಿಸಿದ್ದೇನೆ. ಕಾರ್ಯನಿರ್ವಹಿಸಿರುವ ಊರುಗಳಲ್ಲಿ ಜನ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ. ಪ್ರಶಸ್ತಿ ನೀಡಿದ್ದು ಸಂತಸ ತಂದಿದೆ’ ಎಂದು ಸಜೀದಾ ತಿಳಿಸಿದರು.

A national Florence Nightingale

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version