ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪ್ರತೀ ಜಿಲ್ಲೆಯಿಂದ ಮೃತ್ತಿಕೆ ಸಂಗ್ರಹಿಸುವ ರಥವನ್ನು ಜಿಲ್ಲೆಯಿಂದ ಮಂಗಳವಾರ ಬೀಳ್ಕೊಡಲಾಯಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಗೆ ರಾಜ್ಯದ ಪ್ರತೀ ಜಿಲ್ಲೆಗಳಿಂದ ಮೃತ್ತಿಕೆ ಸಂಗ್ರಹ ಮಾಡಲು ಮೃತ್ತಿಕೆ ಸಂಗ್ರಹ ರಥವನ್ನು ಕಳುಹಿಸಲಾಗಿದ್ದು, ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ಗಳಿಗೆ ತೆರಳಿ ಪವಿತ್ರ ಮಣ್ಣು ಸಂಗ್ರಹಿಸಲಾಗಿದೆ. ಇಂದು ಜಿಲ್ಲೆಯಿಂದ ರಥವನ್ನು ಬೀಳ್ಕೊಡಲಾಗಿದ್ದು, ಬೆಂಗಳೂರಿಗೆ ನಿರ್ಗಮಿಸಲಿದೆ ಎಂದು ಅವರು ಹೇಳಿದರು.
ನವೆಂಬರ್ ೧೧ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಅವರು ಮೃತ್ತಿಕೆ ಸಂಗ್ರಹಕ್ಕೆ ಸಹಕರಿಸಿದ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ರಾಜೇಶ್, ತಹಶೀಲ್ದಾರ್ ವಿನಾಯಕ ಸಾಗರ್, ವಿವಿಧ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದ್ದರು.
Kempegowda statue