ಚಿಕ್ಕಮಗಳೂರು: ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ದಲ್ಲಿ ನಡೆದಿದೆ.
೧೦ ಸಾವಿರ ಲಂಚ ಪಡೆಯುವಾಗ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಎನ್.ಆರ್.ಪುರ ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ವಸಂತ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್. ಎನ್.ಆರ್.ಪುರ ಪಟ್ಟಣದ ಬಸ್ತಿಮಠ ರೋಡ್ ನಿವಾಸಿ ಮಸ್ತಾನ್ ಎಂಬುವರಿಗೆ ಸೇರಿದ ಸಿಮೆಂಟ್ ಲಾರಿ ೧೫ ಟನ್ ತೂಕಕ್ಕಿಂತ ಹೆಚ್ಚುವರಿಯಾಗಿ ಸಾಗಾಟ ಮಾಡಲು ೧೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಮಸ್ತಾನ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಎನ್.ಆರ್.ಪುರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಲಂಚ ಪಡೆಯುವಾಗ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಣದ ಸಮೇತ ಇನ್ಸ್ಪೆಕ್ಟರ್ ಅವರನ್ನ ಬಂಧಿಸಿ ಕೆಲ ಕಾಲ ವಿಚಾರಣೆ ನಡೆಸಿದರು.
ವಿಚಾರಣೆಯ ಬಳಕ ನ್ಯಾಯಾಧೀಶರ ಮುಂದೆ ಆರೋಪಿಯನ್ನು ಹಾಜರುಪಡೆಸುವ ಸಾಧ್ಯತೆಗಳಿವೆ.