ALSO FEATURED IN

Draft voter list published: ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರ ಚೀಟಿ ಪರಿಷ್ಕರಣೆಗೆ ಡಿಸಿ ಸೂಚನೆ

Spread the love

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ವಿವಿಧ ಚಟುವಟಿಕೆ ಹಾಗೂ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಮತದಾರರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೯,೩೪,೭೬೯ ಮತದಾರರಿದ್ದು, ಆ ಪೈಕಿ ೪,೬೪,೨೨೮ ಗಂಡು ಹಾಗೂ ೪,೭೦,೫೦೫ ಹೆಣ್ಣು ಮತದಾರರಿದ್ದಾರೆ. ಅವರಲ್ಲಿ ೧೧,೫೦೨ ೧೮ರಿಂದ ೧೯ ವರ್ಷ ವಯಸ್ಸಿನ ಯುವಮತದಾರಿದ್ದಾರೆ ಎಂದು ಅವರು ತಿಳಿಸಿದರು.

ಭಾರತ ಚುನಾವಣಾ ಆಯೋಗವು ೪ ದಿನಗಳ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ನವೆಂಬರ್ ೧೨, ೨೦, ಡಿಸೆಂಬರ್ ೩ ಮತ್ತು ೪ರಂದು ನಡೆಯಲಿದೆ. ಅದರಂತೆ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಡಿಸೆಂಬರ್ ೮ರವರೆಗೆ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ತಮ್ಮ ಹೆಸರು, ಜನ್ಮದಿನಾಂಕ, ವಿಳಾಸ ಪರಿಷ್ಕರಣೆ ಹಾಗೂ ಭಾವಚಿತ್ರ ಬದಲಾವಣೆ ಮಾಡಿಕೊಳ್ಳಬಹುದು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬೇಕು ಮತ್ತು ತಮ್ಮ ಮತಗಟ್ಟೆಯ ಬಗ್ಗೆ ತಿಳಿದುಕೊಳ್ಳಬೇಕು. ಸಿಇಒ(ಚೀಫ್ ಎಲೆಕ್ಷನ್ ಆಫೀಸರ್) ವೆಬ್‌ಸೈಟ್‌ನಲ್ಲಿ ಇದರ ಕುರಿತಾದ ಸಂಪೂರ್ಣ ಮಾಹಿತಿ ಲಭ್ಯವಾಗುತ್ತವೆ ಎಂದು ತಿಳಿಸಿದರು.

ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳಿಗೆ ಬಿಎಲ್‌ಎ(ಬೂತ್ ಎಲೆಕ್ಷನ್ ಏಜೆಂಟ್) ನೇಮಿಸುವಂತೆ ಸೂಚನೆ ನೀಡಲಾಗುತ್ತದೆ. ೧೮-೧೯ ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಹಾಗೂ ವಿದ್ಯಾರ್ಥಿಗಳ ನೋಂದಣಿಗೆ ವಿಶೇಷ ಅಭಿಯಾನ ನಡೆಸಲಾಗುತ್ತದೆ ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಮತದಾರರ ಪಟ್ಟಿಯಲ್ಲಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಣೆ ಮಾಡಲು ನಮೂನೆ-೬ಬಿಯನ್ನು ಪರಿಚಯಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ ಒಟ್ಟು ಶೇ. ೭೨.೮೦ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ ಉಪಸ್ಥಿತರಿದ್ದರು.

Draft voter list published

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version