ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ವೀರ ವನಿತೆ ಒಬವ್ವ ಜಯಂತಿ ಆಚರಣಾ ಕಾರ್ಯಕ್ರಮವನ್ನು ನವೆಂಬರ್ ೧೧ರಂದು ಬೆಳಿಗ್ಗೆ ಗಂಟೆ ೧೨ಕ್ಕೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜು (ಭೈರತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಘನ ಉಪಸ್ಥಿತಿ ಇರಲಿದ್ದು, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಶಾಸಕ ಆಯನೂರ ಮಂಜುನಾಥ್, ವಿಧಾನಪರಿಷತ್ ಶಾಸಕ ಎಂ.ಕೆ ಪ್ರಾಣೇಶ್, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ವಿಧಾನಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ ವೆಂಕಟೇಶ್ ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಉಪಸ್ಥಿತರಿರಲಿದ್ದಾರೆ.
Onake Obavva Jayanti