ALSO FEATURED IN

The problem is easier if an understanding of the law is adopted.: ಕಾನೂನಿನ ತಿಳುವಳಿಕೆ ಅಳವಡಿಸಿಕೊಂಡಲ್ಲಿ ಸಮಸ್ಯೆ ಸುಲಭ

Spread the love

ಚಿಕ್ಕಮಗಳೂರು:  ಕಾನೂನು ತಿಳುವಳಿಕೆಯನ್ನು ಪ್ರತಿಯೊಬ್ಬರು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಬಗೆಹರಿಸಲು ಧೈರ್ಯ ಹಾಗೂ ಸುಲಭವಾಗಲಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಿ.ವೆಂಕಟೇಶ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಹಾಗೂ ರೋಟರಿಕ್ಲಬ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ’ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಅಂಗಾಂಗ ದಾನದ ಮಹತ್ವದ ಬಗ್ಗೆ ಅರಿವು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾ ಡುತ್ತಿದ್ದರು.

ಜನಸಾಮಾನ್ಯರು ಕಾನೂನಿನ ಬಗ್ಗೆ ಅರಿತುಕೊಳ್ಳುವುದರೊಂದಿಗೆ ಕಾನೂನಿನಲ್ಲಿ ದೊರೆಯುವ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು. ಕೆಲವು ರಾಜೀ ಪ್ರಕರಣಗಳು ಇತ್ಯರ್ಥಗೊಳಿಸಲು ನ್ಯಾಯಾಲ ಯದಿಂದ ಸವಲತ್ತುಗಳನ್ನು ಒದಗಿಸಲಾಗಿದ್ದು ಅವುಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಅಂಗಾಂಗ ದಾನ ಮಹತ್ವದ ಕುರಿತು ಉಪನ್ಯಾಸ ನೀಡಿದ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಎನ್. ಮಹೇಶ್ ಸಾವಿನ ನಂತರ ಮನುಷ್ಯನನ್ನು ನೆನಪಿಸಿಕೊಳ್ಳಬೇಕೆಂದಾದರೆ ಅಂಗಾಂಗ ದಾನದಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಹೆಚ್ಚು ಮಂದಿ ಅಂಗಾಂಗ ದಾನಕ್ಕೆ ನೊಂದಣಿ ಮಾಡಿಸಿಕೊಂಡಲ್ಲಿ ಸಾವಿನ ನಂತರ ನೆನಪಿನಲ್ಲಿ ಉಳಿಯಲು ಸಾಧ್ಯವಾಗಲಿದೆ ಎಂದರು.
ಮಾನವನ ಶರೀರದ ಹೃದಯ, ಶ್ವಾಸಕೋಶ, ನೇತ್ರ ಸೇರಿದಂತೆ ಅನೇಕ ಭಾಗಗಳು ಸುಮಾರು ೫೦ ಮಂದಿ ಜೀವ ಉಳಿಸಲು ಉಪಯೋಗವಾಗುತ್ತದೆ. ಯಾವುದೇ ಜಾತಿ, ಬೇಧ ಇಲ್ಲದೇ ಅವಶ್ಯವಿರು ವವರಿಗೆ ಅಂಗಾಂಗದ ಭಾಗಗಳನ್ನು ಬಳಸಿಕೊಳ್ಳುತ್ತಾರೆ ಎಂದ ಅವರು ಪ್ರತಿಯೊಬ್ಬರು ಇಂದಿನಿಂದಲೇ ಈ ಬಗ್ಗೆ ಅರಿವು ಹೊಂದಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲ ಎಸ್.ಮೇಟಿ ದೇಶದ ಆತ್ಮ ಎಂದರೆ ಕಾರಾಗೃಹ. ಆಕಸ್ಮಿಕವಾಗಿ ಜರುಗುವ ತಪ್ಪಿಗೆ ಕಾರಾಬಂಧಿಗಳಾಗುತ್ತಾರೆ. ತದನಂತರ ತಪ್ಪಿನ ಅರಿವಾಗಿ ಮನಪರಿವರ್ತನೆ ಮೂಲಕ ಸಮಾಜದಲ್ಲಿ ಮುಂದೆ ಸಾಗಲು ಆಸಕ್ತಿ ತೋರುತ್ತಿರುವುದು ಸಂತಸದ ವಿಚಾರ ಎಂದರು.
ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ|| ಹೆಚ್.ಎಸ್.ಅಶ್ವಥಬಾಬು ಪ್ರಾಸ್ತಾವಿಕವಾಗಿ ಮಾತನಾಡಿ ದರು. ನೇತ್ರ ತಪಾಸಣೆಯಲ್ಲಿ ಸುಮಾರು ೧೦೪ ಮಂದಿಗೆ ತಪಾಸಣೆ ನಡೆಸಿ ೨೯ ಮಂದಿಗೆ ಉಚಿತವಾಗಿ ಕನ್ನಡಕವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶ ಎ.ಎಸ್.ಸೋಮ, ವಕೀಲರ ಸಂಘದ ಅಧ್ಯಕ್ಷ ಹೆಚ್.ಸುಧಾಕರ್, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿ ಡಾ|| ಎಸ್.ಎನ್.ಉಮೇಶ್, ಆರ್‌ಸಿಹೆಚ್ ಅಧಿಕಾರಿ ಡಾ|| ಕೆ.ಭರತ್‌ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ಎಸ್.ಸೀಮಾ, ನೇತ್ರ ತಜ್ಞ ಡಾ|| ಎನ್.ಸಖರಾಮಶೆಟ್ಟಿ, ರೋಟರಿ ಕ್ಲಬ್ ನಿರ್ದೇಶಕ ಕೆ.ಬಿ.ಅನಂತೇಗೌಡ, ಕಾರ್ಯದರ್ಶಿ ಡಿ.ಎಸ್.ಪವನ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಎಸ್.ಜಲಜಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

The problem is easier if an understanding of the law is adopted.

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ೧೧ ವರ್ಷದ ಪೀಳಿಗೆಯು ಕೇಂದ್ರದಲ್ಲಿ ಒಂದೇ ಒಂದು ಭ್ರಷ್ಟಾಚಾರವಿಲ್ಲದ ವಿಶ್ವಾಸಾರ್ಹವಾದ, ಒಳ್ಳೆಯ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ೧೧ ವರ್ಷದ ಪೀಳಿಗೆಯು ಕೇಂದ್ರದಲ್ಲಿ ಒಂದೇ ಒಂದು ಭ್ರಷ್ಟಾಚಾರವಿಲ್ಲದ ವಿಶ್ವಾಸಾರ್ಹವಾದ, ಒಳ್ಳೆಯ…

[t4b-ticker]
Exit mobile version