ALSO FEATURED IN

There is a pro-JDS wave in rural areas: ಗ್ರಾಮೀಣ ಪ್ರದೇಶದಲ್ಲಿ ಜೆಡಿಎಸ್ ಪರ ಅಲೆಯಿದೆ

Spread the love

ಚಿಕ್ಕಮಗಳೂರು: ಪಕ್ಷವನ್ನು ಸದೃಡಗೊಳಿಸುವ ಜೊತೆಗೆ ರಾಜ್ಯದಲ್ಲಿ ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಆಸಕ್ತಿಯನ್ನು ಮತದಾರರು ತೋರಲು ಮುಂದಾಗಬೇಕು ಎಂದು ಜೆಡಿಎಸ್ ತಾಲ್ಲೂಕು ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

ತಾಲ್ಲೂಕಿನ ಎಸ್.ಬಿದರೆ ಗ್ರಾಮದ ಶ್ರೀ ಲಕ್ಷ್ಮೀ ರಂಗನಾಥಸ್ವಾಮಿ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ನಂತರ ದೇವಾಲಯದ ಆವರಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಈ ಗ್ರಾಮಗಳಲ್ಲಿ ಜೆಡಿಎಸ್ ವತಿಯಿಂದ ಅನೇಕ ಜನಪರ ಯೋಜನೆಗಳನ್ನು ಆಯೋಜಿಸಲಾಗಿದೆ. ಆರೋಗ್ಯ ದೃಷ್ಟಿಯಿಂದ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ಅನೇಕ ಬಾರಿ ಸುತ್ತಮುತ್ತಲ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಮತ ನೀಡುವ ಮೂಲಕ ಅತ್ಯಧಿಕ ಮತಗಳ ಅಂತರದಿಂದ ಜಯಶೀಲರಾಗಿಸಿ ಹೆಚ್.ಡಿ.ಕುಮಾರಸ್ವಾಮಿ ಅವ ರನ್ನು ಮುಖ್ಯಮಂತ್ರಿ ಮಾಡಿದ್ದಲ್ಲಿ ಗ್ರಾಮೀಣ ಜನತೆಗೆ ಸ್ಪಂದಿಸುವ ಉತ್ತಮ ಯೋಜನೆಗಳನ್ನು ನೀಡಿ ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತದೆ ಎಂದು ಭರವಸೆ ನೀಡಿದರು.

ಕುಮಾರಸ್ವಾಮಿಯವರು ಅಧಿಕರಾವಧಿಯಲ್ಲಿ ಗ್ರಾಮೀಣ ಜನತೆಗೆ ಸಾಲಮನ್ನಾ, ರೈತರ ಮಕ್ಕಳಿಗೆ ಶಿಕ್ಷಣ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಿದ್ದಾರೆ. ಇವುಗಳನ್ನು ಮನಗಂಡು ಗ್ರಾಮಸ್ಥರು ಮುಂದಿನ ಒಳ್ಳೆಯ ದಿನಗಳಿಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಅಲ್ಲಂಪುರ ಗ್ರಾಮದಲ್ಲಿ ಶುಕ್ರವಾರ ಕಾರ್ಯಕರ್ತರ ಸಭೆ ನಡೆಸಲಾಗಿದೆ. ನ.೨೭ ರಂದು ಗ್ರಾಮಸ್ಥರ ಅನುಕೂಲಕ್ಕಾಗಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಎಸ್.ಬಿದರೆ ಗ್ರಾಮಸ್ಥರಾದ ಬಸವರಾಜ್, ರಂಗಸ್ವಾಮಿ, ಚೇತನ್, ಆದರ್ಶ ಹಾಗೂ ಪಕ್ಷದ ಅನೇಕ ಮಂದಿ ಕಾರ್ಯಕರ್ತರು ಹಾಜರಿದ್ದರು.

There is a pro-JDS wave in rural areas

 

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version