ALSO FEATURED IN

11,133 government action to regularize the service of civil servants: 11,133 ಪೌರಕಾರ್ಮಿಕರ ಸೇವೆ ಕಾಯಂಗೊಳಿಸಲು ಸರ್ಕಾರ ಕ್ರಮ

Spread the love

ಚಿಕ್ಕಮಗಳೂರು: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 11,133 ಪೌರಕಾರ್ಮಿಕರ ಸೇವೆ ಕಾಯಂಗೊಳಿಸಲು ಸರ್ಕಾರ ಕ್ರಮವಹಿಸಲಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ (ಕೋಟೆ) ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕ ಮುಖಂಡರೊಂದಿಗೆ ಬುಧವಾರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ 5,133 ಪೌರಕಾರ್ಮಿಕರು ಮತ್ತು ಕಾರ್ಪೊರೇಶನ್‍ಗಳಲ್ಲಿ 1,927 ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ 3,670 ಪೌರಕಾರ್ಮಿಕರನ್ನು ಮುಂದಿನ ಒಂದೂವರೆ ತಿಂಗಳೊಳಗೆ ಕಾಯಂಗೊಳಿಸಲು ಕ್ರಮವಹಿಸಲಾಗುವುದು ಎಂದರು

ಸರ್ಕಾರ ಪೌರಕಾರ್ಮಿಕರು ಹಾಗೂ ಕುಟುಂಬದ ಒಳಿತಿಗಾಗಿ ವಸತಿ, ಆರೋಗ್ಯ, ಶಿಕ್ಷಣ ಸಹಿತ ಹಲವು ಯೋಜನೆ ಮೂಲಕ ಸವಲತ್ತು ಕಲ್ಪಿಸಿದೆ. ಅಧಿಕಾರಿಗಳು ಮಾಹಿತಿ ನೀಡಿ ಫಲಾನುಭವಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ ವಸತಿರಹಿತ ಪೌರಕಾರ್ಮಿಕರನ್ನು ಗುರುತಿಸಿ ವಸತಿ ನೀಡುವಂತೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಎಲ್ಲ ಗ್ರಾಮಪಂಚಾಯಿತಿಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಲಾಗಿದೆ. ಜಿಲ್ಲೆಗೆ ಎಲ್‌ಡಿಎಂ ಯೋಜನೆಯಡಿ ₹2 ಕೋಟಿ ಅನುದಾನ ಮಂಜೂರಾಗಿದೆ. ಎಲ್ಲ ಪಂಚಾಯಿತಿಗಳಲ್ಲಿ ಸ್ವಚ್ಛವಾಹಿನಿ ಮೂಲಕ ಕಸ ಸಂಗ್ರಹಣೆ ಮಾಡಲಾಗುತ್ತಿದೆ. ಪೌರಕಾರ್ಮಿಕರ ಹಿತ ಕಾಯಲಾಗುತ್ತಿದೆ ಎಂದರು.

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಸುವರ್ಣ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ವಿ.ಚೈತ್ರಾ, ಶಿವಾನಂದ್, ವೆಂಕಟೇಶ್ ಇದ್ದರು.

11,133 government action to regularize the service of civil servants

Facebook
X
WhatsApp
Telegram
Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಸಂಚರಿಸಿದ ಬಾಬ್ತು ಸರ್ಕಾರ ನಿಗಮಕ್ಕೆ ನೀಡಿದ ಹಣದಲ್ಲಿ…

Spread the love

ಚಿಕ್ಕಮಗಳೂರು: ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

[t4b-ticker]
Exit mobile version