ಪ್ರತಿ ದಿನ ಹೊರಡುವ ಸಮಯ ಎಷ್ಟು?
ವಿಮಾನ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗಕ್ಕೆ 10.30ಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಡುವ ವಿಮಾನ 1.30ಕ್ಕೆ ಬೆಂಗಳೂರು ತಲುಪಲಿದೆ. ಸದ್ಯ ಇಂಡಿಗೋ ಸಂಸ್ಥೆ ಬೆಂಗಳೂರು-ಶಿವಮೊಗ್ಗ ನಡುವೆ ಒಂದು ವಿಮಾನವನ್ನು ಮಾತ್ರ ಓಡಿಸಲಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
2,500ರಿಂದ 3,500 ರೂ. ಟಿಕೆಟ್ ದರ?
ಬೆಂಗಳೂರು- ಶಿವಮೊಗ್ಗ ಮಾರ್ಗಕ್ಕೆ 2,500ರಿಂದ 3,500 ರೂ. ತನಕ ದರ ನಿಗದಿ ಆಗುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಇಂಡಿಗೋ ವೆಬ್ಸೈಟ್ ಮೂಲಕ ಟಿಕೆಟ್ ಬುಕ್ ಕೂಡ ಮಾಡಬಹುದಾಗಿದೆ.
ಒಟ್ಟಿನಲ್ಲಿ ರಾಜಾಹುಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಕನಸಿನ ಕೂಸು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಆರು ತಿಂಗಳುಗಳ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನಯಾನ ಆರಂಭವಾಗಲಿದೆ.
ಈಗಾಗಲೇ ವಿಮಾನ ಸಂಚಾರಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆ, ಸಕಲ ಪೂರ್ವಭಾವಿ ತಯಾರಿ ನಡೆಸಲಾರಂಭಿಸಿದೆ. ಶಿವಮೊಗ್ಗ-ಬೆಂಗಳೂರು ನಡುವೆ 78 ಆಸನ ಸಾಮರ್ಥ್ಯದ ವಿಮಾನ ಹಾರಾಟಕ್ಕೆ ಸಂಸ್ಥೆ ಮುಂದಾಗಿದೆ.
Flight from Shimoga started from August 11