ಜನರಿಗೆ ಕಡಿಮೆ ದರದಲ್ಲಿ ಆಹಾರ ನೀಡಲು 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಯೋಜನೆ(Indira canteen scheme) ಜಾರಿಗೊಳಿಸಿದ್ದರು. ಆದರೆ, ಕಳೆದ ಮೂರೂವರೆ ವರ್ಷಗಳಿಂದ ಕ್ಯಾಂಟೀನ್ಗಳು ನಿರ್ವಹಣೆ ಕೊರತೆಯಿಂದ ಜನರಿಗೆ ಸಮರ್ಪಕವಾಗಿ ಆಹಾರ ಪೂರೈಸುತ್ತಿಲ್ಲ. ಇದೀಗ ಇಂದಿರಾ ಕ್ಯಾಂಟೀನ್ಗಳನ್ನು ದುರಸ್ತಿಗೊಳಿಸಿ, ಹೊಸ ರೂಪದೊಂದಿಗೆ ಮತ್ತೆ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಕ್ಯಾಂಟೀನ್ಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕ್ಯಾಂಟೀನ್ಗಳಲ್ಲಿ ಪೂರೈಸುವ ಆಹಾರ ಕ್ರಮವನ್ನು ಬದಲಿಸಬೇಕು. ಪ್ರಮುಖವಾಗಿ ಉತ್ತರ ಕರ್ನಾಟಕದ ಕ್ಯಾಂಟೀನ್ಗಳಲ್ಲಿ ಅಲ್ಲಿನ ಆಹಾರವನ್ನೇ ಪೂರೈಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಕ್ಯಾಂಟೀನ್ಗಳಲ್ಲಿ ಸ್ವಚ್ಛತೆ, ಗುಣಮಟ್ಟಹಾಗೂ ಪ್ರಮಾಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಆಹಾರ ಪೂರೈಸಬೇಕು. ಜತೆಗೆ ಎಲ್ಲ ಕ್ಯಾಂಟೀನ್ಗಳಿಗೂ ಹೊಸದಾಗಿ ಮೆನು ಸಿದ್ಧಪಡಿಸಿ, ಅದನ್ನು ಪೂರೈಸಬೇಕು ಎಂದು ಸೂಚಿಸಿದರು.
ಕ್ಯಾಂಟೀನ್ಗಳ ನಿರ್ವಹಣೆಗಾಗಿ ಬೆಂಗಳೂರು ಹೊರತುಪಡಿಸಿ ಇತರ ನಗರಗಳ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಅದರಂತೆ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆ ಮತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರ ಶೇ. 70 ರಷ್ಟುಅನುದಾನ ನೀಡಿದರೆ, ಉಳಿದ ಶೇ. 30ರಷ್ಟನ್ನು ಸ್ಥಳೀಯ ಸಂಸ್ಥೆಗಳೇ ಭರಿಸಬೇಕು ಎಂದರು.
Indira canteens in the state have been given a new look and relaunched