ಚಿಕ್ಕಮಗಳೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಮೀನಾ ನಾಗರಾಜ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಇಲ್ಲಿ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಮೂಲದವರೇ ಅದ ಐ.ಎ.ಎಸ್. ಅಧಿಕಾರಿ ಮೀನಾ ಅವರು ಈ ಹಿಂದೆ ಕಾರ್ಯನಿರ್ವಹಿಸಿದ್ದ ಇಲಾಖೆಗಳಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾಗಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಸ್ಥಾನವನ್ನು ಸೂಚಿಸಿಲ್ಲ.
ಇತ್ತೀಚೆಗೆ ಚಿಕ್ಕಮಗಳೂರು ಜಿ.ಪಂ. ಸಿ.ಇ.ಓ. ಸ್ಥಾನದಿಂದ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾಗಿ ವರ್ಗಾವಣೆ ಆಗಿದ್ದ ಜಿ.ಪ್ರಭು ಅವರನ್ನು ಇದೀಗ ತುಮಕೂರು ಜಿ.ಪಂ. ಸಿ.ಇ.ಓ. ಅಗಿ ನೇಮಕ ಮಾಡಲಾಗಿದೆ.
ಸರ್ಕಾರ ವರ್ಗಾವಣೆ ಮಾಡಿರುವ ವಿವಿಧ ಅಧಿಕಾರಿಗಳ ವಿವರ ಈ ಕೆಳಗಿನಂತಿದೆ.
Dr. Meena Nagaraj has been appointed as the new District Collector