ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ssನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿ ಕಾರಿ ಮೀನಾ ನಾಗರಾಜ್ ಅವರಿಗೆ ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಮೀನಾ ನಾಗರಾಜ್ ಅವರು ಈ ಹಿಂದೆ ಬೆಂಗಳೂರು ಮಾಹಿತಿ ತಂತ್ರ ಜ್ಞಾನ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಂತೆ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಕಳೆದ ಎರಡು ವರ್ಷಗಳಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೆ.ಎನ್.ರಮೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಯಾವುದೇ ಹುದ್ದೆಯನ್ನು ತೋರಿಸಿಲ್ಲ. ಎರಡು ವರ್ಷಗಳ ಅವಧಿಯಲ್ಲಿ ಕೆ. ಎನ್.ರಮೇಶ್ ಅವರು ಜನಪರವಾಗಿ ಕೆಲಸ ಮಾಡಿದ್ದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
New District Collector Meenanagaraj assumes office