ಚಿಕ್ಕಮಗಳೂರು: ಆತ್ಮವಿಶ್ವಾಸದಿಂದ ಕೆಲಸ ಮಾಡಿದರೇ ಯಶಸ್ಸು ಗಳಿಸಲು ಸಾಧ್ಯ ಎಂದು ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ರಾಗಿ ಕಾರ್ಯನಿರ್ವಹಿಸಿ ನಿವೃತ್ತಿಗೊಂಡ ಕೆ.ಸಿ.ದಕ್ಷಿಣಮೂರ್ತಿ ತಿಳಿಸಿದರು.
ಶುಕ್ರವಾರ ನಗರದ ಕೆಆರ್ಐಡಿಲ್ ಸಂಭಾಗಣದಲ್ಲಿ ಆಯೋಜಿಸಿದ್ದ ಬಿಳ್ಕೋಡಿಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ತಾವು ನಿರ್ವಹಿಸುವ ಕೆಲಸದಲ್ಲಿ ನೈಪುಣ್ಯತೆ ಹೊಂದಿದ್ದರೇ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು ಎಂದ ಅವರು, ನನ್ನ ವೃತ್ತಿ ಜೀವನದಲ್ಲಿ ಅನೇಕ ಕಡೆಗಳಲ್ಲಿ ಕೆಲಸ ನಿರ್ವಹಿಸಿ ಯಶಸ್ವಿಯಾಗಿದ್ದೆನೆ ಎಂದರು.
ಉಡುಪಿಯಲ್ಲಿ ಕೆಲಸ ನಿರ್ವಹಿಸಿದಾಗ ಅತ್ಯಂತ ಸಂತೋಷದಿಂದ ಕಾರ್ಯನಿರ್ವಹಿಸಿದ್ದೇನೆ ಎಂದ ಅ ವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು ಸಂತೋಷ ತಂದಿದೆ. ಲ್ಯಾಂಡ್ಆರ್ಮಿಯಲ್ಲಿ ಕೆಲಸ ನಿರ್ವಹಿಸುವಾಗಿ ಗುಣಮಟ್ಟ, ತಾಂತ್ರಿಕತೆಯಿಂದ ಕೂಡಿರಬೇಕು. ಇದಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೆಲ ಸ ನಿರ್ವಹಿಸಬೇಕು ಎಂದು ಅಲ್ಲಿನ ಸಿಬ್ಬಂದಿಗಳಿಗೆ ಸಲಹೆ ನೀಡಿದರು.
ಕಾರ್ಯಪಾಲಕ ಇಂಜಿನಿಯರ್ರಾದ ವಿ.ಎನ್.ಅಶ್ವಿನಿ ಮಾತನಾಡಿ ಕೆ.ಸಿ.ದಕ್ಷಿಣಮೂರ್ತಿ ಅವರು ಸಂಸ್ಥೆ ಯಲ್ಲಿ ೩೭ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ ಎಂದ ಅವರು, ಸಂಸ್ಥೆ ಯಲ್ಲಿ ಅನೇಕರಿಗೆ ಮಾರ್ಗದರ್ಶನ ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಿ.ಉಮೇಶ್ ನಾಯಕ್, ಚಂದನ್ ಸ್ವಾಗತಿಸಿ ವಂದಿಸಿದರು.
Success is possible only by working with confidence