ALSO FEATURED IN

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ದಿ ವೇಣುಗೋಪಾಲ್ ರಾಜೀನಾಮೆ

Spread the love

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ವರಸಿದ್ದಿ ವೇಣುಗೋಪಾಲ್ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ನನ್ನ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿಸುತ್ತಿರುವುದಾಗಿ ಒಂದು ಸಾಲಿನ ಹೇಳಿಕೆ ನೀಡಿದ್ದಾರೆ.

೧೭ ತಿಂಗಳ ಕಾಲ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದ ವೇಣುಗೋಪಾಲ್, ನಗರದಲ್ಲಿ ಗೋಹತ್ಯೆ, ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ಅಕ್ರಮ ಕಸಾಯಿಖಾನೆಗಳನ್ನು ಬುಲ್ಡೋಜರ್‌ಗಳಿಂದ ನೆಲಸಮಗೊಳಿಸಿ ಅದೇ ಜಾಗದಲ್ಲಿ ಮಕ್ಕಳ ಉದ್ಯಾನ ನಿರ್ಮಿಸಿ ಮೆಚ್ಚುಗೆ ಗಳಿಸಿದ್ದರು. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಂಡಿದ್ದಲ್ಲದೆ. ಸ್ವಚ್ಛತೆಗೂ ಆಧ್ಯತೆ ನೀಡಿದ್ದರು.

ಮೊದಲ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಇಬ್ಬರಿಗೆ ಅವಕಾಶ ಕೊಡಲು ಆರಂಭದಲ್ಲೇ ಬಿಜೆಪಿ ತೀರ್ಮಾನಿಸಿತ್ತು. ಪಕ್ಷದ ಸಭೆಯಲ್ಲಿ ಆಂತರಿಕ ಒಪ್ಪಂದವನ್ನೂ ಮಾಡಲಾಗಿತ್ತು. ಈ ಪ್ರಕಾರ ವೇಣುಗೋಪಾಲ್ ೧೫ ತಿಂಗಳ ನಂತರ ಅಧಿಕಾರ ಬಿಟ್ಟುಕೊಡಬೇಕಿತ್ತಾದರೂ ೧೭ ತಿಂಗಳು ೧೭ ದಿನಗಳ ನಂತರ ರಾಜೀನಾಮೆ ನೀಡಿದ್ದಾರೆ.

ಹಿಂದೆಯೇ ಆಗಿದ್ದ ಒಪ್ಪಂದದ ಪ್ರಕಾರ ಮುಂದಿನ ೧೩ ತಿಂಗಳ ಅವಧಿಗೆ ಮಧುಕುಮಾರ ರಾಜ್ ಅರಸ್ ಅವರು ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಈ ತೀರ್ಮಾನಕ್ಕೆ ಉಳಿದೆಲ್ಲಾ ಬಿಜೆಪಿ ಸದಸ್ಯರು ಸಹಮತ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಧುಕುಮಾರ್ ಅವರ ಹಾದಿ ಸುಗಮವಾಗಲಿದೆ.

ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿರುವ ಕಾಂಗ್ರೆಸ್ ಪಕ್ಷ ನಗರಸಭೆಯಲ್ಲೂ ಆಪರೇಷನ್ ಹಸ್ತ ನಡೆಸಿ ಅಧಿಕಾರ ಹಿಡಿಯುವ ಸಾಧ್ಯತೆಗಳಿವೆ ಎನ್ನುವ ಕಾರಣಕ್ಕೆ ಎಲ್ಲಾ ಬಿಜೆಪಿ ಸದಸ್ಯರು ಇತ್ತೀಚೆಗಷ್ಟೇ ಧರ್ಮಸ್ಥಳಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ್ದನ್ನಿಲ್ಲಿ ಸ್ಮರಿಸಬಹುದಾಗಿದೆ.

ಈ ನಡುವೆ ಕಾರ್ಯಕ್ರಮವೊಂದರಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಅವರು ಮಾತನಾಡಿ, ಮುಂದಿನ ಹತ್ತುತಿಂಗಳ ಕಾಲ ನಗರಸಭೆ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಆಪರೇಷನ್ ಹಸ್ತದ ಸಾಧ್ಯತೆಗಳನ್ನು ತಳ್ಳಿಹಾಕಿದ್ದರು.

Varasiddi Venugopal resigns

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version