ALSO FEATURED IN

ತೇಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ರಾಧಾಗುರುಸ್ವಾಮಿ, ಉಪಾಧ್ಯಕ್ಷರಾಗಿ ಮನುಜಗಣೇಶ್ ರಾಜ್ ಅವಿರೋಧವಾಗಿ ಆಯ್ಕೆ

Spread the love

ಚಿಕ್ಕಮಗಳೂರು: ತಾಲ್ಲೂಕಿನ ತೇಗೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ರಾಧಾಗುರುಸ್ವಾಮಿ ಉಪಾಧ್ಯಕ್ಷರಾಗಿ ಮನುಜಗಣೇಶ್ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಶ್ವೇತಾ ಘೋಷಿಸಿದರು.

ಸಿಡಿಎ ಅಧ್ಯಕ್ಷ ಆನಂದ್ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ ಮಾತನಾಡಿ ಬಿಜೆಪಿ ಸರ್ಕಾರವು ಮೆಡಿಕಲ್ ಕಾಲೇಜು ಸೇರಿದಂತೆ ಹಲವು ಯೋಜನೆಗಳನ್ನು ತೇಗೂರು ಗ್ರಾಪಂಗೆ ತರುವುದರ ಮೂಲಕ ಮಾಜಿ ಶಾಸಕ ಸಿ.ಟಿ.ರವಿ ರವರು ಸಾಕಷ್ಟು ಸಹಕಾರವನ್ನು ನೀಡಿದ್ದಾರೆ, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರೆಲ್ಲರು ಒಟ್ಟಾಗಿ ತಮಗೆ ಸಿಕ್ಕಿರುವ ಸಮಯದಲ್ಲಿ ಗ್ರಾಮ ಪಂಚಾಯಿತಿಯನ್ನು ಅಭಿವೃಧ್ಧಿ ಪಡಿಸುವ ನಿಟ್ಟಿನಲ್ಲಿ ಕೆಲಸವನ್ನು ನಿರ್ವಹಿಸಬೇಕೆಂದು ತಿಳಿಸಿದರು.

ಮಾಜಿ ಸಿಡಿಎ ಅಧ್ಯಕ್ಷ ಕೋಟೆ ರಂಗನಾಥ್ ಮಾತನಾಡಿ ಒಮ್ಮತದಿಂದ ಸಹಕಾರ ನೀಡಿದ ಎಲ್ಲಾ ಸದಸ್ಯರಿಗು ಧನ್ಯವಾದವನ್ನು ತಿಳಿಸಿದ ಅವರು ನಗರಕ್ಕೆ ಹೊಂದಿಕೊಂಡಿರುವ ತೇಗೂರು ಗ್ರಾಮ ಪಂಚಾಯಿತಿಯಲ್ಲಿ ೩೦ ತಿಂಗಳ ನಂತರ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಬಂದಿದ್ದು, ಕಳೆದ ಬಾರಿಯಂತೆ ಈ ಬಾರಿಯು ಸಹ ಬಿಜೆಪಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಗೊಂಡಿದ್ದಾರೆ, ಮಾಜಿ ಶಾಸಕ ಸಿ.ಟಿ.ರವಿ ರವರು ಈ ಪಂಚಾಯಿತಿ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜನ್ನು ತರುವ ಮೂಲಕ ತೇಗೂರು ಪಂಚಾಯಿತಿಯನ್ನು ನಗರಪ್ರದೇಶವನ್ನಾಗಿ ಮಾಡಿದ್ದಾರೆ ಎಂದರು.

ತೇಗೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ರಾಧಾಗುರುಸ್ವಾಮಿ ಮಾತನಾಡಿ ಗ್ರಾಪಂ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ವಂದನೆಗಳನ್ನು ತಿಳಿಸಿದ ಅವರು ತೇಗೂರು ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳಾದ ಬೀದಿ ದೀಪ, ಕುಡಿಯುವ ನೀರು, ರಸ್ತೆ, ಚರಂಡಿ ಮತ್ತು ಸ್ವಚ್ಚತೆಗೆ ಹೆಚ್ಚು ಆದ್ಯತೆಯನ್ನು ನೀಡುವ ಮೂಲಕ ಅಭಿವೃದ್ಧಿ ಕೆಲಸವನ್ನು ಮಾಡಲಾಗುವುದು ಎಂದು ತಿಳಿಸಿದರು.

ತೇಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವನಜಾಗಣೇಶ್ ರಾಜ್ ಮಾತನಾಡಿ ತಮ್ಮ ಅಧಿಕಾರವಧಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸುವುದರ ಜೊತೆಗೆ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕನಕರಾಜ್ ಅರಸ್, ವೆಂಕಟೇಶ್, ರಾಜೀವ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾರಾಯಣ್, ಜಯಶ್ರೀ, ಮಹೇಶ್ ಕುಮಾರ್, ಗಣೇಶ್‌ರಾಜ್, ಜಯ್ಯಮ್ಮ, ಪವನ್, ಸುಧಾ, ದೇವಮ್ಮ, ರಂಗನಾಥ್, ಪ್ರಸಾದ್, ಸ್ವಾತಿ, ಶೇಖರ್, ಪಿಡಿಓ ಸ್ಮಿತಾ, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Tegur Gram Panchayat

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version