ಚಿಕ್ಕಮಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಡವರ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನಾಚರಣೆಯನ್ನು ದೇವಾಲಯಗಳಲ್ಲಿ ಮತ್ತು ದರ್ಗಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ತಿಳಿಸಿದರು.
ಅವರು ಗುರುವಾರ ನಗರದ ಗಣಪತಿ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ೭೬ನೇ ಹುಟ್ಟು ಹಬ್ಬದ ಅಂಗವಾಗಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ನ ಎಲ್ಲಾ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದು ನಂತರ ದರ್ಗಾಕ್ಕೆ ಹೋಗಿ ಪ್ರಾರ್ಥನೆ ಮಾಡಿದ್ದು ರಕ್ತದಾನ ಶಿಬಿರ, ವೃದ್ದಾಶ್ರಮದಲ್ಲಿ ಅನ್ನ ಸಂತರ್ಪಣೆ ಮುಂತಾದ ಜನಪರವಾದ ಸಿದ್ದರಾಮಯ್ಯನವರು ರಾಜ್ಯದ ಜನರಿಗೆ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.
ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ ಬಡವರ ಬಂಧು ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ೭೬ನೇ ಹುಟ್ಟು ಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವರೆಯಿಂದ ಗಣಪತಿಗೆ ಪೂಜೆ ಸಲ್ಲಿಸಿ ನಂತರ ದರ್ಗದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್ ಮೂರ್ತಿ ಮಾತನಾಡಿ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಜೀವನವನ್ನೇ ಸಾರ್ವಜನಿಕ ಸೇವೆಗೆ ಮುಡಿಪಾಗಿದ್ದು ತಮ್ಮ ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು.
ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ನಯಾಜ್ ಅಹಮ್ಮದ್ ಮಾತನಾಡಿ ಸರ್ವ ಸಮಾಜದವರು ಒಟ್ಟಾಗಿ ಸಿದ್ದರಾಮಯ್ಯನವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಮುಖಂಡರುಗಳಾದ ಕೆ.ವಿ.ಮಂಜುನಾಥ್, ಕೆ.ಮೊಹಮದ್, ಜೆ.ಬಿ.ಮಹೇಶ್, ತನೋಜ್ ನಾಯ್ಡ್, ಹಿರೇಮಗಳೂರು ರಾಮಚಂದ್ರ, ನಗರಸಭೆ ಸದಸ್ಯರುಗಳಾದ ಶದಾಬ್ ಅಲಂ ಖಾನ್, ಮುನೀರ್ ಅಹಮ್ಮದ್, ಖಲಂದರ್, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.
Pooja as part of Chief Minister Siddaramaiah’s 76th birthday celebrations at Ganapati temple in the city