- ಚಿಕ್ಕಮಗಳೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಗುಳುವಳ್ಳಿ ಗ್ರಾಮಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಭಾಗ್ಯನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಎಂ.ಡಿ.ಉಮೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಣೆ ಮಾಡಿದರು.
ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ ಗ್ರಾಮ ಪಂಚಾಯಿತಿ ಆಡಳಿತವು ವ್ಯವಸ್ಥೆ ದೃಷ್ಟಿಯಿಂದ ಕಟ್ಟಡದ ಬದ್ರ ಬುನಾದಿ ಇದ್ದಂತೆ, ಪಕ್ಷದ ಹಿರಿಯರ ಮಾರ್ಗದರ್ಶನ ಪಡೆದು ಜನ ಸಾಮಾನ್ಯರಿಗೆ ಉತ್ತಮ ಆಡಳಿತ ನೀಡುವಂತೆ ತಿಳಿಸಿದರು.
ಗ್ರಾಮಗಳಲ್ಲಿ ಪ್ರತಿಯೊಬರಿಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವಂತೆ ಸಲಹೆ ನೀಡಿದರು. ಅಧಿಕಾರಿಗಳು, ಸ್ಥಳೀಯ ಮುಖಂಡರುಗಳು, ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು, ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಶಾಲೆ, ಅಂಗನವಾಡಿ ಸೇರಿದಂತೆ ಗ್ರಾಮಗಳ ಅಗತ್ಯತೆಗಳನ್ನು ಪೂರೈಸಬೇಕು ಎಂದರು.
ಆಲ್ದೂರು ಮಂಡಲ ಬಿಜೆಪಿ ಅಧ್ಯಕ್ಷ ದಿನೇಶ್ ಅಭಿನಂಧನೆ ಸಲ್ಲಿಸಿ ಮಾತನಾಡಿ ಒಗ್ಗಟ್ಟಿಗೆ ಹೆಸರುವಾಸಿಯಾದ ನಮ್ಮ ಗ್ರಾಮ ಪಂಚಾಯಿತಿ, ಸಾಮರಸ್ಯಕ್ಕೂ ಈ ದಿನ ಸಾಕ್ಷಿಯಾಗುತ್ತಿದೆ, ಎರಡು ಹುದ್ದೆಗಳು ಸಾಮಾನ್ಯ ಕೆಟಗರಿ ಬಂದರೂ, ಸರ್ವಸದಸ್ಯರು ಪಕ್ಷದ ಸೂಚನೆಯನ್ನು ಸಂತೋಷದಿಂದ ಒಪ್ಪಿ, ಎಸ್ಸಿ ಸಮುದಾಯದವರನ್ನು ಅಧ್ಯಕ್ಷ ಉಪಾಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಅವರೆಲ್ಲರಿಗೂ ಧನ್ಯವಾದ ಹೇಳಿದರು, ಪಂಚಾಯಿತಿ ಅಭಿವೃದ್ಧಿಯಲ್ಲಿ ಯಾವತ್ತೂ ಹಿಂದೆ ಇಲ್ಲಾ, ಮತ್ತುಷ್ಟು ಅಭಿವೃದ್ಧಿಯತ್ತ ಗಮನ ಹರಿಸಿ ಜನಸಾಮಾನ್ಯರಿಗೆ ಉತ್ತಮ ಸವಲತ್ತು ಸಿಗುವಂತೆ ನೋಡಿಕೊಳ್ಳಬೇಕು ಎಂದರು.
ನೂತನ ಅಧ್ಯಕ್ಷೆ ಭಾಗ್ಯನಾಗರಾಜ್ ಮಾತನಾಡಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗು ಹಾಗೂ ಗ್ರಾಮಸ್ಥರಿಗು ಧನ್ಯವಾದಗಳನ್ನು ತಿಳಿಸಿದ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿಯ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ, ಬೀದಿ ದೀಪ, ಕುಡಿಯುವ ನೀರು, ಚರಂಡಿ ಮತ್ತು ರಸ್ತೆಗೆ ಪ್ರಮುಖ ಆದ್ಯತೆ ನೀಡಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇವೆ ಎಂದರು.
ಗ್ರಾಪಂ ಉಪಾಧ್ಯಕ್ಷ ಎಂ.ಡಿ.ಉಮೇಶ್ ಮಾತನಾಡಿ ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ, ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಗಮನ ನೀಡಿ ಎಲ್ಲಾ ಸದಸ್ಯರ ಸಹಕಾರದಿಂದ ಮಾದರಿ ಗ್ರಾಮ ಪಂಚಾಯಿತಿ ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಘುನಂದನ್.ಎಂ.ಎ, ಶೇಖರ್.ಬಿ.ಎಸ್, ಮಲ್ಲೇಶಪ್ಪ.ಟಿ, ಸವಿತಾಉಮೇಶ್, ಅನಿತಾಉಮೇಶ್, ವನಿತಾಉಮೇಶ್, ಪಿಡಿಓ ಸುಮ, ಕಾರ್ಯದರ್ಶಿ ಕಲ್ಲೇಶ್, ಫ್ಯಾಕ್ಸ್ ನಿರ್ದೇಶಕರಾದ ಬಸವರಾಜ್, ಉಮೇಶ್, ಓಬಿಸಿ ಅಧ್ಯಕ್ಷ ಮನೆನಹಳ್ಳಿ ರಾಜು ಉಪಸ್ಥಿತರಿದ್ದರು.
Election held in Muguluvalli Gram Panchayat
Trending
- e-paper (19-07-2025) Chikkamagalur Express
- ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡುವಂತೆ ಸೂಚನೆ
- 2047ಕ್ಕೆ `ಏಳು ಬೀಜಗಳಿಂದ ಏಳು ಲಕ್ಷ ಟನ್ಗೆ ಭಾರತದ ಕಾಫಿ ಜಿಗಿತ’
- e-paper (18-07-2025) Chikkamagalur Express
- ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ
- ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ