ಚಿಕ್ಕಮಗಳೂರು: ಇದೇ ಆ.೯ ರಂದು ಮನೆ ಮನೆ ಮೇಲೆ ಕನ್ನಡ ಬಾವುಟ ಎಂಬ ವಿಭಿನ್ನ, ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾಧ್ಯಕ್ಷ ಚನ್ನಕೇಶವ.ಸಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅಂದು ಬೆಳಗ್ಗೆ ೧೧ ಗಂಟೆಗೆ ನಗರದ ಹನುಮಂತಪ್ಪ ವೃತ್ತದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯಅವರು ಮನೆ ಮತ್ತು ಕಟ್ಟಡ ಮಾಲೀಕರಿಗೆ ಕನ್ನಡ ಬಾವುಟ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಉಪಸ್ಥಿತರಿರುವರು ನಂತರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಸದಸ್ಯರು ಮತ್ತು ಕನ್ನಡ ಬಂಧುಗಳು ಬೈಕ್ರ್ಯಾಲಿ ಮತ್ತು ಆಟೋಗಳಲ್ಲಿ ಎಂ.ಜಿ ರಸ್ತೆ ಮೂಲಕ ಐ.ಜಿ. ರಸ್ತೆ, ಮಾರ್ಕೆಟ್ ರಸ್ತೆ ಮೂಲಕ ಹಾದು ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ಜಾಥ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.
ಕನ್ನಡಿಗರು ಮತ್ತು ಕನ್ನಡವು ಸಾರ್ವಭೌಮ ಆಗಿದ್ದು ಈ ಮೈಸೂರು ಸಾಮ್ರಾಜ್ಯವನ್ನು iಟಿsಣಡಿumeಟಿಣ oಜಿ ಚಿಛಿಛಿessioಟಿ ಮೂಲಕ ಇಂಡಿಯಾ ಒಕ್ಕೂಟಕ್ಕೆ ವಿಲೀನಗೊಳಿಸಲು ಮೈಸೂರು ಸಾಮ್ರಾಜ್ಯವನ್ನು ತ್ಯಾಗ ಮಾಡಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ರವರು ಸಹಿ ಹಾಕಿ ಒಪ್ಪಿಸಿದ ದಿನವಾಗಿದೆ ಎಂದರು.
ಈ ಸುದಿನವನ್ನು ನೆನಪಿಸುವ ಸಲುವಾಗಿ ಆ.೯ ರಂದು ಮನೆ ಮನೆ ಮೇಲೆ ಕನ್ನಡ ಬಾವುಟ ಎಂಬ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಸಮಸ್ತ ಜನತೆಗೆ ತಲುಪಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಪರಿಷತ್ತಿನ ವತಿಯಿಂದ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು ಪ್ರತೀ ಜಿಲ್ಲೆಯಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಕನ್ನಡ ನಾಡಿನ ಸಮಸ್ತ ಕನ್ನಡ ಬಂಧುಗಳು ಸ್ವಯಂ ಪ್ರೇರಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕನ್ನಡ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವಂತೆ ವಿನಂತಿಸಿದರು.
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಕೂಲಿಕಾರ್ಮಿಕರು, ಹಮಾಲಿ ಕಾರ್ಮಿಕರು ಶೋಷಿತರು ದಿನಗೂಲಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಅಸಂಘಟಿತ ಕಾರ್ಮಿಕರು ಮತ್ತು ಸಂಘಟಿತ ಕಾರ್ಮಿಕರು ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಹೀಗೆ ಹಲವಾರು ಕಾರ್ಮಿಕರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವುದಲ್ಲದೆ ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆಯೂ ಸಹ ಹೋರಾಡುವಲ್ಲಿ ಪ್ರಮುಖವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಕಾರ್ಯಾಧ್ಯಕ್ಷ ಅರವಿಂದರಾಜ್, ಉಪಾಧ್ಯಕ್ಷ ಧರ್ಮಚಾರಿ ಸಂಘಟನಾ ಕಾರ್ಯದರ್ಶಿಗಳಾದ ಸಿ.ಪಿ.ಯೋಗೀಶ್ ಶೆಟ್ಟಿ, ಆದರ್ಶ್ ಸಿ.ಎನ್ ಇದ್ದರು.
Karnataka State Labor Council district president Channakesava.C press conference