ಚಿಕ್ಕಮಗಳೂರು: ಕುಂಕಾನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹರೀಶ್ ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಸಿದ್ಧರಾಜುನಾಯ್ಕ್ ತಿಳಿಸಿದರು.
ನೂತನ ಅಧ್ಯಕ್ಷ ಹರೀಶ್ ಮಾತನಾಡಿ ಸದಸ್ಯರೆಲ್ಲರ ಒಗ್ಗಟ್ಟಿನಿಂದ ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗು ಧನ್ಯವಾದಗಳನ್ನು ತಿಳಿಸಿದ ಅವರು ಸದಸ್ಯರು ಹಾಗೂ ಗ್ರಾಮಸ್ಥರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ದಕ್ಕೆ ಬರದ ರೀತಿಯಲ್ಲಿ ಗ್ರಾಮ ಪಂಚಾಯಿತಿ ಕೆಲಸಗಳನ್ನು ಉತ್ತಮವಾಗಿ ಮಾಡುವ ಮೂಲಕ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವುದೇ ನನ್ನ ಗುರಿ ಎಂದರು.
ಅಭಿವೃಧ್ಧಿ ವಿಷಯದಲ್ಲಿ ನಮ್ಮ ಗ್ರಾಮ ಪಂಚಾಯಿತಿ ಯಾವುದೇ ರೀತಿಯಲ್ಲಿ ಹಿಂದೆ ಉಳಿದಿಲ್ಲ, ಕುಡಿಯುವ ನೀರು, ರಸ್ತೆ, ಶೈಕ್ಷಣಿಕ ಹಾಗೂ ಆರೋಗ್ಯದಂತಹ ಮೂಲಭೂತ ಸೌಕರ್ಯಗಳು ೮೦% ಭಾಗದಷ್ಟು ಪೂರೈಕೆಯಾಗಿದೆ, ಮುಂದಿನ ದಿನಗಳಲ್ಲಿ ಶಾಸಕರು, ಎಂಪಿಗಳು ಮತ್ತು ವಿಧಾನಪರಿಷತ್ ಸದಸ್ಯರು ಸೇರಿದಂತೆ ಸರ್ಕಾರ ಜೊತೆಗೆ ಒಡನಾಟವನ್ನಿಟ್ಟುಕೊಂಡು ಅಭಿವೃದ್ಧಿ ಪಥದಕಡೆಗೆ ಸಾಗಲು ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.
ಕುಂಕಾನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ ಮಾತನಾಡಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಹಾಗೂ ಗ್ರಾಮದ ಮುಖಂಡರಿಗು ಧನ್ಯವಾದಗಳನ್ನು ತಿಳಿಸಿದ ಅವರು ಉತ್ತಮ ಕೆಲಸ ಮಾಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ದೇವಾನಂದ್, ಮುಖಂಡರಾದ ಆಲದಹಳ್ಳಿ ಆನಂದ್, ರವಿಕುಮಾರ್, ಶಶಿಕುಮಾರ್, ಪವನ್ ಇತರರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
Kunkanadu Village Panchayat