ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿಯೂ ಸಹ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಕ್ರೀಡಾಪಟುಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.
ಜೋಡಿಹೋಚಿಹಳ್ಳಿ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆದ್ದವರು ಬೀಗದೆ, ಸೋತವರು ಬಾಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆದ್ದೆ ಗೆಲ್ಲುತ್ತೇನೆ ಎಂಬ ಕ್ರೀಡಾ ಮನೋಭಾವನೆಯಿಂದ ಆಟವನ್ನು ಆಡಬೇಕು ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ತೀರ್ಪುಗಾರು ಪ್ರಾಮಾಣಿಕ ತೀರ್ಪನ್ನು ನೀಡಬೇಕು ಎಂದು ತಿಳಿಸಿದರು.
ನಾನು ಸಹ ೧ ರಿಂದ ೧೦ನೇ ತರಗತಿಯ ವರೆಗೆ ಸರ್ಕಾರಿ ಶಾಲೆಯಲ್ಲಿಯೇ ವ್ಯಾಸಂಗ ಮಾಡಿದ್ದು, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಕೀಳರಿಮೆ ತಿಳಿಯಬಾರದು, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಇಂದು ಉನ್ನತ ಹುದ್ಧೆಗಳನ್ನು ಅಲಂಕರಿಸಿದ್ದು, ಮೊರಾರ್ಜಿ ಶಾಲೆ ಪ್ರಾರಂಭ ಆದಾಗಿನಿಂದ ಯಾವುದೇ ಖಾಸಗಿ ವಸತಿ ಶಾಲೆಗಳಿಗೂ ಕಡಿಮೆ ಇಲ್ಲ ಎಂಬ ರೀತಿಯಲ್ಲಿ ಸರ್ಕಾರವು ನೋಡಿಕೊಳ್ಳಲಾಗುತ್ತಿದೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ, ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮೀದೇವಿಜಗನಾಥ್, ಪ್ರಾಂಶುಪಾಲರಾದ ರವಿ, ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ, ಕಡೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಉಪಾಧ್ಯಕ್ಷ ಜಗಧೀಶ್, ಪ್ರಧಾನ ಕಾರ್ಯದರ್ಶಿ ಅಶೋಕ್, ಸಂಘಟನಾ ಕಾರ್ಯದರ್ಶಿ ಯಮುನಮೋಹನ್, ಗೀತಾಜ್ಞಾನಮೂರ್ತಿ, ಬಸಪ್ಪ, ಬೆನಕಪ್ಪ, ಮಾದಯ್ಯ, ಪರಮೇಶ್ವರಪ್ಪ, ಮುಳ್ಳಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮಂಜುನಾಥ್ ಉಮಾಶಂಕರ್ ನಿರೂಪಿಸಿ ಮಂಜುನಾಥ್ ವಂದಿಸಿದರು.
Sports of Jodihochihalli Zonal Level Senior Primary Schools