ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿಯಲ್ಲಿರುವ ನೂನ್ಯತೆಗಳನ್ನು ಸರಿಪಡಿಸಿ ಜಾರಿಮಾಡಬೇಕು ಮತ್ತು ಜಿಲ್ಲೆಯ ಅರಣ್ಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಂದಾಯ ಅರಣ್ಯ ಸಚಿವರನ್ನೊಳಗೊಂಡ ನೂತನ ೫ ಶಾಸಕರು ಹಾಗೂ ಹೋರಾಟ ಸಮಿತಿ ಪದಾಧಿಕಾರಿಗಳ ಸಭೆ ಕರೆದು ಸೂಕ್ತ ಪರಿಹಾರ ಒದಗಿಸಬೇಕೆಂದು ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್.ವಿಜಯಕುಮಾರ್ ಒತ್ತಾಯಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಸ್ತೂರಿರಂಗನ್ ವರದಿ, ಡೀಮ್ಡ್ ಅರಣ್ಯ ಸಮಸ್ಯೆ, ಸೆಕ್ಷನ್ ೪(೧) ಮೀಸಲು ಅರಣ್ಯ ಸಮಸ್ಯೆ, ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ, ಇನಾಂ ಸಮಸ್ಯೆ ಹಾಗೂ ಕಂದಾಯ ಮತ್ತು ಗೋಮಾಳ ಭೂಮಿಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ಜನತೆಗೆ ಮತ್ತು ಅರಣ್ಯ ಇಲಾಖೆ ಹಾಗೂ ಕಾಡು ಪ್ರಾಣಿಗಳ ಸಂಘರ್ಷದಿಂದ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ಕೃತಕ, ಸ್ವಾಭಾವಿಕ ಅರಣ್ಯ ಎಂದು ಪ್ರತ್ಯೇಕಿಸಿಲ್ಲ ಜೊತೆಗೆ ನೈಜ ಸಮಸ್ಯೆಗಳ ಬಗ್ಗೆ ಜನರಿಗೆ ತಿಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಅವರು ಇದೊಂದು ಪರಿಸರದ ಹೆಸರಿನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಲಾಭಿಮ, ಕೊಡಲೆ ಈ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸಬೇಕೆಂದು ಒತ್ತಾಯಿಸಿದರು.
ಹಲವಾರು ವರ್ಷಗಳಿಂದ ರಾಜ್ಯದ ೧೦ ಜಿಲ್ಲೆಗಳಲ್ಲಿ ಕಸ್ತೂರಿರಂಗನ್ ವರದಿ ವಿಚಾರವಾಗಿ ಹಲವಾರು ಮಾಹಿತಿಗಳು ಹರಿದಾಡುತ್ತಿದ್ದು, ಇದಕ್ಕೆ ತಾರ್ಕಿಕ ಅಂತ್ಯ ಕಾಣದೆ ಇರುವುದರಿಂದ ಜನಸಾಮಾನ್ಯರಲ್ಲಿ ದಿನೇ ದಿನೇ ವರದಿಯ ಬಗ್ಗೆ ಆತಂಕ ಹೆಚ್ಚಾಗುತ್ತಿದೆ ಎಂದರು.
ಸುಮಾರು ೩ ವರ್ಷಗಳ ಹಿಂದೆ ಸುಪ್ರೀಂಕೋರ್ಟ್ ಹಸಿರು ಪೀಠದ ಆದೇಶದ ಅನ್ವಯ ತೂಗುಗತ್ತಿಯಾಗಿದ್ದ ವರದಿಯನ್ನು ಹಿಂಪಡೆಯಬೇಕು ಅದರಲ್ಲಿರುವ ನ್ಯೂನತೆಗಳನ್ನು ಸರಿತೂಗಿಸಬೇಕೆಂದು ಒತ್ತಾಯಿಸಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಸುಮಾರು ೧೬ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಬಹಿಷ್ಕರಿಸಿ ಸರ್ಕಾರಗಳ ಮೇಲೆ ಒತ್ತಡ ಹಾಕಿ ತಾತ್ಕಾಲಿಕ ಸಮಯಾವಕಾಶ ಪಡೆಯಲಾಗಿತ್ತು ಎಂದು ತಿಳಿಸಿದರು.
ಈ ಸಮಿತಿಯ ಕಾರ್ಯವೈಖರಿಯ ನಿಷ್ಕ್ರಿಯತೆಯನ್ನು ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಆಗಿಂದಾಗೇ ಅಧಿಕಾರಿಗಳಿಗೆ, ಮಂತ್ರಿಗಳಿಗೆ, ಚುನಾಯಿತ ಪ್ರತಿನಿಧಿಗಳಿಗೆ ಮನವಿ ನೀಡಿ ಸಮಿತಿಯು ವರದಿಯ ವ್ಯಾಪ್ತಿಯ ಪ್ರದೇಶಗಳಿಗೆ ಬೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸುವಂತೆ ಒತ್ತಾಯಿಸಲಾಗುತ್ತಿತ್ತು ಎಂದರು.
ಮಾಧ್ಯಮಗಳ ಮುಖಾಂತರ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸವನ್ನು ಸಹ ಮಾಡಲಾಗುತ್ತಿತ್ತು. ಆದರೆ ಈ ಸಮಿತಿಯು ೧ ವರ್ಷ ಕಳೆದರು ಯಾವುದೇ ಹಳ್ಳಿಗಳಿಗೆ ಭೇಟಿ ನೀಡದೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೆ ತೆರಳಿ ರಾಜ್ಯದ ಅರಣ್ಯ ಮಂತ್ರಿ ಈಶ್ವರ್ಖಂಡ್ರೆ ರವರನ್ನು ಭೇಟಿ ಮಾಡಿ ವರದಿ ಜಾರಿಗೆ ತರಲು ಚರ್ಚಿಸಿರುವುದನ್ನು ಖಂಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕರಾದ ಕೆ.ಕೆ ರಘು, ಪ್ರವೀಣ್, ಎಂ.ಎಸ್ ಉಮೇಶ್, ಉಪಸ್ಥಿತರಿದ್ದರು.
Anti-Kasturi Rangan Report Struggle Committee Chief Convener S.Vijayakumar