ಚಿಕ್ಕಮಗಳೂರು: ಆಧುನಿಕತೆಯ ಕಾಲಘಟ್ಟದಲ್ಲಿ ಶಾಲಾ ಮಕ್ಕಳಿಗೆ ವಿಜ್ಞಾನದ ಅರಿವಿನ ಕೊರತೆ ಯಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಸಕ್ರಿಯರಾಗಬೇಕು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಗೌರವಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ನಗರದ ಸಂತಜೋಸೆಫರ ಬಾಲಿಕಾ ಪ್ರೌಢಶಾಲೆಯಲ್ಲಿ ಸೋಮವಾರ ಕ್ಷೇತ್ರ ಶಿಕ್ಷಣ ಇಲಾಖೆ, ಶಾಲಾ ಮಕ್ಕಳ ಇಲಾಖೆ, ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ ಮತ್ತು ಜಿಲ್ಲಾ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಪದ್ಮಶ್ರೀ ಯುಸೂಫ್ ಹಮೀದ್ ಪ್ರೇರಣೆಯ ವಿಜ್ಞಾನ ಕಾರ್ಯಕ್ರಮವನ್ನು ಪುಸ್ತಕ ಬಿಡುಗಡೆ ಗೊಳಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯಗಳು ಕಬ್ಬಿಣದ ಕಡಲೆಯಂ ತಾಗಿದೆ. ವಿರ್ದ್ಯಾಥಿಗಳು ಮುತುವರ್ಜಿ ವಹಿಸಿ ಶ್ರದ್ದೆ ಹಾಗೂ ಆಳವಾಗಿ ಅಧ್ಯಯನದಲ್ಲಿ ತೊಡಗಿದರೆ ಸಂಬಂಧಿಸಿದ ವಿಷಯಗಳು ಅತ್ಯಂತ ಸುಲಭವಾಗಲಿದೆ ಎಂದು ಹೇಳಿದರು.
ಹಿಂದಿನ ಸಮಯದಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ರೀತಿಯ ತರಬೇತಿಗಳಿರಲಿಲ್ಲ. ಕಾಲಕ್ಕೆ ತಕ್ಕಂತೆ ಎಲ್ಲವು ಬದಲಾಗಿದ್ದು ವಿದ್ಯಾರ್ಥಿಗಳಿಗೆ ವಿಜ್ಞಾನದ ಅರಿವು ಮೂಡಿಸುವ ಕ್ವಿಜ್, ಮಕ್ಕಳ ವಿಜ್ಞಾನ ಸಮಾವೇಶ ತರ ಬೇತಿಯನ್ನು ರಾಜ್ಯ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ ಹಮ್ಮಿಕೊಳ್ಳುವ ಮೂಲಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸು ತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಸಿ.ರವೀಶ್ ಮಾತನಾಡಿ ಇಂದಿನ ಆಧುನಿಕತೆಯಲ್ಲಿ ಮಕ್ಕಳು ಸಣ್ಣಪುಟ್ಟ ವಸ್ತು, ಪ್ರಾಣಿಗಳನ್ನು ಸ್ಪರ್ಶಿಸುವುದು ಹಾಗೂ ಹಣ್ಣು, ಬೀಜಗಳನ್ನು ಗುರುತಿಸುವುದು ಕಡಿಮೆಯಾಗುತ್ತಿದೆ. ಈ ಬಗ್ಗೆ ಶಿಕ್ಷಕರು ಮುಂಜಾಗ್ರತಾ ಕ್ರಮವಹಿಸಬೇಕು. ಮಕ್ಕಳ ಮನಸ್ಸಿನಲ್ಲಿ ಮನದಟ್ಟಾಗುವಂತೆ ಬೋಧಿಸುವ ಮೂಲಕ ಮುನ್ನೆಡೆಸಬೇಕು ಎಂದು ಕಿವಿಮಾತು ಹೇಳಿದರು.
ವಿಜ್ಞಾನ ಕೇಂದ್ರದ ಸಹ ಕಾರ್ಯದರ್ಶಿ ಪ್ರಶಾಂತ್ ಪ್ರಾಸ್ತಾವಿಕವಾಗಿ ಮಾತನಾಡಿ ವಿಜ್ಞಾನ ಕಾರ್ಯಕ್ರಮಗಳ ನ್ನು ಆಯೋಜಿಸುವ ಸಂಬಂಧ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ಸ್ವಲ್ಪ ತಡವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಕೆಲವು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಎರಡು ದಿನದ ಕಾರ್ಯಾಗಾರ ಹಮ್ಮಿಕೊಂಡಿದ್ದು ತರಬೇತಿ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯ ಕೃಷ್ಣಮೂರ್ತಿ ಅರಸ್, ಜಿಲ್ಲಾ ವಿಜ್ಞಾನ ಕೇಂದ್ರದ ಅಧ್ಯಕ್ಷ ಸತ್ಯನಾರಾಯಣ್, ಉಪಾಧ್ಯಕ್ಷ ಓಂಕಾರಪ್ಪ, ಕಾರ್ಯದರ್ಶಿ ಪ್ರಕಾಶ್, ಡಯಟ್ ಹಿರಿಯ ಉಪನ್ಯಾಸಕ ಶರಶ್ಚಂದ್ರ, ಪ್ರಶಾಂತ್, ರಾಸಾಯನಿಕ ಶಾಸ್ತ್ರ ಪ್ರೊ. ಡಾ|| ಕಂದಗಲ್, ಸಂತ ಜೋಸೆಫರ ಶಾಲೆಯ ಶಿಕ್ಷಕ ಪ್ರಕಾಶ್ ಮತ್ತಿತರರು ಹಾಜರಿದ್ದರು.
Padma Shri Yusuf Hamid Inspirational Science Program Book Release