ಚಿಕ್ಕಮಗಳೂರು: ವಿಧಾನ ಪರಿಷತ್ನ ನೈರುತ್ಯ ವಲಯದ ಶಿಕ್ಷಣ ಕ್ಷೇತ್ರದಲ್ಲಿನ ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕ ನಂಜೇಶ್ ಬೆಣ್ಣೂರು ತಿಳಿಸಿದರು.
ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿ?ಯ ತಿಳಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರ ನಿರ್ದೇಶನದಂತೆ ಟಿಕೆಟ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿದರು.
ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, ಸೇರಿದಂತೆ ಐದು ಜಿಲ್ಲೆಗಳ ವ್ಯಾಪ್ತಿಗೆ ನೈರುತ್ಯ ವಲಯ ಶಿಕ್ಷಕರ ಕ್ಷೇತ್ರ ಬರಲಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕುಗಳು ಈ ಕ್ಷೇತ್ರದ ವ್ಯಾಪ್ತಿಯಲ್ಲಿದೆ ಈಗಾಗಲೇ ಈ ಭಾಗದಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಮೂಲತಃ ನಾನು ಸಹ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಿಕ್ಷಕರು ಈ ಚುನಾವಣೆಯಲ್ಲಿ ಕೈ ಹಿಡಿಯುವರು ಎಂಬ ನಂಬಿಕೆ ಇದ್ದು, ವಿಧಾನ ಪರಿ?ತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಈ ಮೂಲಕ ಶಿಕ್ಷಕರ ಅಭಿವೃದ್ಧಿಗೆ ಮತ್ತು ಶಿಕ್ಷಕ ಸಮಸ್ಯೆಗಳ ಬಗ್ಗೆ ಹೋರಾಡಿ ಶಿಕ್ಷಕರ ಧ್ವನಿಯಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಪರವಾಗಿ ೫ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ವಿಶೇ? ಪಾತ್ರ ವಹಿಸಿದ್ದನ್ನು ಗಮನಿಸಿ ನನ್ನನ್ನು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕನಾಗಿ ಬಡ್ತಿ ನೀಡಿರುವುದಕ್ಕೆ ರಾ? ಹಾಗೂ ರಾಜ್ಯ ನಾಯಕರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದರು.
ಬಡ್ತಿ ನೀಡಿರುವ ಭಾರತೀಯ ಯೂಥ್ ಕಾಂಗ್ರೆಸ್ನ ಅಧ್ಯಕ್ಷ ಶ್ರೀನಿವಾಸ್ ಬಿ.ಬಿ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥರಾದ ಮನುಜೈನ್ ಮತ್ತು ಕರ್ನಾಟಕ ರಾಜ್ಯ ಅಧ್ಯಕ್ಷರಾದ ಹ್ಯಾರೀಸ್ ನಲಪಾಡ್ ಹಾಗೂ ಸಾಮಾಜಿಕ ಮಾಧ್ಯಮದ ಅಧ್ಯಕ್ಷರಾದ ರಾಹುಲ್ಮನೋಜ್ಕುಮಾರ್ ಸೇರಿದಂತೆ ಎಲ್ಲಾ ನಾಯಕರಿಗೂ ಧನ್ಯವಾದ ಅರ್ಪಿಸುವುದರೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಭಾರತದಲ್ಲಿ ಕಾಂಗ್ರೆಸ್ ಗೆಲುವಿಗೆ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಲು ಶ್ರಮವಹಿಸುವುದರ ಜೊತೆಗೆ ನೀಡಿರುವ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರುಗಳಾದ ಧರ್ಮಯ್ಯ, ನಾಗೇಶ್ ಅಭಿ?ಕ್, ಜಗದೀಶ್ ಇದ್ದರು.
Nanjesh Bennoor, State Coordinator of Social Media