ಚಿಕ್ಕಮಗಳೂರು: ರಾಜ್ಯಾದ್ಯಂತ ಏಕಕಾಲಕ್ಕೆ ಸರ್ಕಾರದ ೫ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ’ಗೃಹಲಕ್ಷ್ಮಿ’ ಯೋಜನೆಗೆ ಆ.೩೦ ರಂದು ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಅಧಿಕೃತ ಚಾಲನೆ ನೀಡಲಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿಯೂ ಜಾರಿ ಮಾಡಲು ನೇರ ಪ್ರಸಾರ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಅವರು ಇಂದು ವಾರ್ತಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆ.೩೦ ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ, ಅದರಂತೆ ಜಿಲ್ಲೆಯ ೩೫ ಸ್ಥಳೀಯ ಸಂಸ್ಥೆಗಳು, ಪಟ್ಟಣ ಪಂಚಾಯಿತಿಗಳು ಹಾಗೂ ೨೨೬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ನೇರ ಪ್ರಸಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಉದ್ಘಾಟಿಸುವ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ನಗರದ ಕುವೆಂಪು ಕಲಾಮಂದಿರದಲ್ಲಿ ಹಾಗೂ ತರೀಕೆರೆಯಲ್ಲಿ ವ್ಯವಸ್ಥೆ ಮಾಡಿಕೊಂಡಿರುವುದಾಗಿ ತಿಳಿಸಿದ ಅವರು ಪ್ರತಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿದ್ದು, ತಾಲ್ಲೂಕು ಕೇಂದ್ರದಲ್ಲಿ ಆಯಾ ಶಾಸಕರು ಉದ್ಘಾಟಿಸಲಿದ್ದು ಉಳಿದಂತೆ ಗ್ರಾ.ಪಂ ಮಟ್ಟದಲ್ಲಿ ಜನಪ್ರತಿನಿಧಿಗಳು ಈ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ೨,೪೨,೬೨೯ ಫಲಾನುಭವಿಗಳು ನೊಂದಣಿ ಮಾಡಿಕೊಂಡಿದ್ದಾರೆ ಒಟ್ಟು ೨,೮೦,೯೩೭ ಅರ್ಹತಾ ಪಟ್ಟಿಯಲ್ಲಿದ್ದು, ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತಿತರ ಕಾರಣಗಳಿಂದ ಶೇಕಡ ೩೫ ರ? ಕಡಿಮೆಯಾಗಿದ್ದು ಅಂದು ಈ ಎಲ್ಲಾ ಫಲಾನುಭವಿಗಳಿಗೆ (ಡಿ.ಬಿ.ಟಿ) ನೇರ ಹಣ ವರ್ಗಾವಣೆ ಮೂಲಕ ೨,೩೭,೪೧೪ ಕೋಟಿ ರೂ. ನೀಡಲಾಗುವುದೆಂದು ಹೇಳಿದರು.
ಇದರಿಂದಾಗಿ ಪ್ರತಿ ತಿಂಗಳು ೪೭,೪೮,೨೮,೦೦೦ ರೂ. ವರ್ಗಾವಣೆ ಮಾಡಲಾಗುವುದು ಈ ಕಾರ್ಯಕ್ರಮದ ಅನು?ನದಲ್ಲಿ ಲೋಪದೋ?ಗಳಾಗದಂತೆ ಕ್ರಮ ವಹಿಸಲಾಗಿದೆ. ಸ್ತ್ರೀಶಕ್ತಿ ಸಂಘಗಳ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗೋಪಾಲಕೃ? ಮಾತನಾಡಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ನೋಂದಣಿಯಲ್ಲಿ ಜಿಲ್ಲೆ ಟಾಪ್ ೧೦ ನೇ ಸ್ಥಾನದಲ್ಲಿದೆ, ನಗರ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಲ್ಯಾಣ ಮಂಟಪ, ಸಮುದಾಯ ಭವನ ಮತ್ತಿತರೆಡೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ಸಿದ್ಧತೆ ನಡೆಸಲಾಗಿದೆ ಎಂದರು.
ಅಂದು ಗೃಹಲಕ್ಷ್ಮಿಯರು ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ರಂಗೋಲಿ ಹಾಕಿ, ತಳಿರು ತೋರಣಗಳಿಂದ ಸಿಂಗರಿಸುವ ಜೊತೆಗೆ ವೀಕ್ಷಣೆಗೆ ಬರುವ ಫಲಾನುಭವಿಗಳಿಗೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಫಲಾನುಭವಿಗಳನ್ನು ಕರೆತರಲು ಗ್ರಾಮ ಪಂಚಾಯಿತಿ ಬಿಲ್ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೈದ್ಯರು ದಾದಿಯರು ಇರುವಂತೆ ಆದೇಶ ನೀಡಲಾಗಿದ್ದು ಜನರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಶೀಘ್ರ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಉಪಸ್ಥಿತರಿದ್ದರು.
Grilahakshmi Yojana