ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡುವ ಮೂಲಕ ಸಮರ್ಥವಾಗಿ ಕೆಲಸ ಮಾಡುವುದರೊಂದಿಗೆ ಸಾರ್ವಜನಿಕರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಹೇಳಿ ದರು.
ನಗರದ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನಗರದ ಪ್ರಮುಖ ಕಡೆಗಳಲ್ಲಿ ಬೀದಿದೀಪ ಸಮಸ್ಯೆಯಿಂದ ಅನೈತಿಕ ಚಟುವಟಿಕೆಗಳ ತಾಣವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು ಅಂತಹ ಜಾಗಗಳನ್ನು ಶೀಘ್ರದಲ್ಲೇ ಪರಿಶೀಲನೆ ನಡೆಸಿ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯ ಜನತೆ ನೆಮ್ಮದಿ ಜೀವಿಸಲು ಪ್ರಮುಖ ಆದ್ಯತೆ ನೀಡುವುದು, ದಲಿತ ದೌರ್ಜನ್ಯ ಕಾಯ್ದೆ, ಅತ್ಯಾಚಾರ ಪ್ರಕರಣಗಳನ್ನು ಕಡಿಮೆಗೊಳಿಸುವ ಸಲುವಾಗಿ ತಿಳುವಳಿಕೆ ಮೂಡಿಸುವ ಪ್ರಯತ್ನಕ್ಕೆ ಮುಂದಾಗುವುದು ಆ ಹಿನ್ನೆಲೆ ಯಲ್ಲಿ ನಾಗರೀಕರ ಸಂಪೂರ್ಣ ಸಹಕಾರವು ಅವಶ್ಯಕವಾಗಿದೆ ಎಂದರು.
ಪೊಲೀಸ್ ಇಲಾಖೆಯ ಅಧಿಕಾರಿಗಳು ನಿವಾಸಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜನಸ್ನೇಹಿ ಆಡಳಿತಕ್ಕೆ ಕಟಿಬದ್ದರಾಗಿದ್ದು ಈ ಹಿಂದಿನ ವರಿಷ್ಟಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ ಮಾದರಿಯಲ್ಲೇ ತಾವು ಕೂಡಾ ಕಾನೂನು ಕಾಪಾಡುವ ಹಾಗೂ ಸುಧಾರಣೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಗಿರಿಪ್ರದೇಶಗಳಲ್ಲಿ ಪ್ರವಾಸಿಗರು ಅತಿಹೆಚ್ಚು ಮಾದಕ ವಸ್ತುಗಳ ಸೇವನೆ ಬಳಕೆ ಹಾಗೂ ಅನಧಿಕೃತ ಹೋಂ ಸ್ಟೇಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಮುಂದಿನ ದಿನಗಳಲ್ಲಿ ಮಾದಕ ವಸ್ತುಗಳ ಸೇವಿಸುವ ಪ್ರವಾಸಿಗರನ್ನು ಪರೀಕ್ಷೆಗೊಳಪಡಿಸಿ, ದೃಢವಾದಲ್ಲಿ ಕ್ರಮ ಕೈಗೊಳ್ಳಲಾಗುವುದು. ಹೋಂಸ್ಟ್ರೇ ಸಂಬಂಧ ಆಯಾ ಸಂಘದವರೊಂದಿಗೆ ಮಾತುಕತೆ ನಡೆಸುವ ಮೂಲಕ ಸೂಕ್ತ ಕ್ರಮಕ್ಕೆ ಮುಂದಾಗಲಾಗುವುದು ಎಂದರು.
ನಗರದ ಪ್ರಮುಖ ರಸ್ತೆಗಳಲ್ಲಿ ಒನ್ವೇ ನಾಮಫಲಕಗಳಿದ್ದರೂ ವಾಹನಗಳು ಸಾಗುತ್ತಿವೆ. ಜೊತೆಗೆ ಮಹತ್ಮ ಗಾಂಧಿ ಪಾರ್ಕ್ ಮುಖ್ಯರಸ್ತೆಯಲ್ಲಿ ಪ್ರವಾಸಿಗರು ಜೀಪುಗಳನ್ನು ಓವರ್ಟೆಕ್ ಮಾಡುವ ಮೂಲಕ ಪಾದಚಾರಿಗಳು ಹಾಗೂ ಅಕ್ಕಪಕ್ಕದ ವಾಹನ ಸವಾರರಿಗೆ ತೊಂದರೆ ನೀಡುತ್ತಿರುವ ಸಂಬಂಧ ಪ್ರತಿಯಿಸಿದ ಅವರು ಅತಿವೇಗ ಹಾಗೂ ಕಾನೂನು ನಿಯಮ ಉಲ್ಲಂಘಿಸುವವರಿಗೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೀಗ ತಾವು ಹೊಸದಾಗಿ ಪೊಲೀಸ್ ವರಿಷ್ಟಾಧಿಕಾರಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ನಾಳೆಯಿಂದಲೇ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳನ್ನು ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಆ ನಿಟ್ಟಿನಲ್ಲಿ ಪ್ರತಿ ಯೊಬ್ಬ ಪೊಲೀಸ್ ಅಧಿಕಾರಿಗಳ ಸಹಕಾರವು ಅಗತ್ಯವಾಗಿರುವ ಕಾರಣ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ಅಹಿತಕರ ಘಟನೆಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಹಾಗೂ ಇತರೆ ಅಧಿಕಾರಿ ವೃಂದ ದವರು ಉಪಸ್ಥಿತರಿದ್ದರು.
ಪೊಲೀಸ್ ಕಸ್ಟಡಿಗೆ ಕೆ.ಎ.ಎಸ್ ಅಧಿಕಾರಿ ಉಮೇಶ್
ಚಿಕ್ಕಮಗಳೂರು: ಅಕ್ರಮ ಭೂ ಮಂಜೂರು ಪ್ರಕರಣ ಸಂಬಂಧ ಬಂಧನ ಒಳಗಾಗಿರುವ ಕೆ.ಎ.ಎಸ್ ಅಧಿಕಾರಿ ಉಮೇಶ್ ಅವರನ್ನು ವಿಚಾರಣೆ ಹಿನ್ನೆಲೆ ಪೊಲೀಸ್ ಇಲಾಖೆ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮ ಭೂ ಮಂಜೂರಾತಿ ಪ್ರಕರಣ ಸಂಬಂಧಪಟ್ಟ ತರೀಕೆರೆ ಉಪ ವಿಭಾಗಾಧಿಕಾರಿ ಡಾ. ಕಾಂತರಾಜ್ ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಂಬಂಧ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ಕೊಳ್ಳಲಾಗಿದೆ ಎಂದು ತಿಳಿಸಿದರು.
ತರೀಕೆರೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ, ಉಳಿಗನಾರು ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಅಕ್ರಮ ದಾಖಲಾತಿ ಮಾಡಿರುವ ಆರೋಪವನ್ನು ಜೆ ಉಮೇಶ್ ಎದುರಿಸುತ್ತಿದ್ದಾರೆ
Law and order in the district is the first priority