ಚಿಕ್ಕಮಗಳೂರು: ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಬದುಕು ಇಂದಿನ ಕ್ರೀಡಾಪಟುಗಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೆಹರು ಯುವ ಕೇಂದ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಗರದ ಬಸವನಹಳ್ಳಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಸ್ಮರಣಾರ್ಥ ಮಂಗಳವಾರ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಡುಬಡತನದಲ್ಲಿದ್ದ ಧ್ಯಾನ್ ಚಂದ್ ಅವರು ಮರದ ಕೋಲನ್ನೇ ಮುರಿದು ಹಾಕಿ ಸ್ಟಿಕ್ ಅನ್ನಾಗಿ ಮಾಡಿಕೊಳ್ಳುವುದರ ಜೊತೆಗೆ ಬಳ್ಳಿಯಲ್ಲಿದ್ದ ಕಾಯನ್ನೇ ಚೆಂಡನ್ನಾಗಿ ಮಾಡಿಕೊಂಡು ದೇಶದ ಹೆಮ್ಮೆಯ ಕ್ರೀಡಾಪಟುವಾಗಿ ಬೆಳೆದವರು ಎಂದರು.
ಇಂದಿನ ಮಕ್ಕಳಿಗೆ ಆ ರೀತಿಯ ಕ?ಗಳಿಲ್ಲ ಪೋ?ಕರು ಮತ್ತು ಸರ್ಕಾರ ಅವರಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸಿದೆ ಮಕ್ಕಳು ಅದನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ದೈಹಿಕ ಸಾಮರ್ಥ್ಯಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಬೇಕು ಪೋ?ಕರು ಮತ್ತು ತಾವು ಕಲಿತ ವಿದ್ಯಾಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಕಿವಿ ಮಾತು ಹೇಳಿದರು.
ಹಾಕಿ ಮಾಂತ್ರಿಕ ಧ್ಯಾನಚಂದ್ ಅವರು ವಿದೇಶಿಯರ ಎಲ್ಲಾ ರೀತಿಯ ಒತ್ತಡ ಮತ್ತು ಆಸೆ ಆಮಿ?ಗಳನ್ನು ತಿರಸ್ಕರಿಸಿ ನಾನು ಭಾರತದ ಪುತ್ರ ಭಾರತಕ್ಕಾಗಿ ಮಾತ್ರ ಆಡುತ್ತೇನೆ ಎಂದು ದೇಶಕ್ಕಾಗಿ ಆಡಿದವರು ಇಂದಿನ ಕ್ರೀಡಾಪಟುಗಳು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರದಲ್ಲಿ ಸುಸಜ್ಜಿತವಾದ ಅಥ್ಲೆಟಿಕ್ಸ್ ಫುಟ್ಬಾಲ್ ಶಟಲ್ ಬ್ಯಾಟ್ಮಿಂಟನ್ ಕ್ರೀಡಾಂಗಣವನ್ನು ನಿರ್ಮಿಸಲಿದ್ದು ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದೆ ಸಂಬಂಧಪಟ್ಟ ಸಚಿವರಿಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ವಿದ್ಯಾರ್ಥಿಗಳು ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ ಬದುಕಿನಿಂದ ಸ್ಪೂರ್ತಿ ಪಡೆದುಕೊಳ್ಳಬೇಕು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ ಮನು?ನಿಗೆ ವಿದ್ಯೆಯ? ಕ್ರೀಡೆಯೂ ಮುಖ್ಯ ಇತ್ತೀಚಿನ ದಿನಗಳಲ್ಲಿ ಸರ್ಕಾರ ಶಿಕ್ಷಣದಲ್ಲಿ ಕ್ರೀಡೆಯೂ ಒಂದು ಭಾಗ ಎಂದು ಪರಿಗಣಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ವಿದ್ಯಾರ್ಥಿಗಳು ಕ್ರೀಡೆಗಳನ್ನು ಬದುಕಿನ ಭಾಗವಾಗಿ ತೆಗೆದುಕೊಂಡು ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಬೆಳೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಗೋಪಾಲಕೃ? ಮಾತನಾಡಿ ಕ್ರೀಡೆಗಳಿಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಬೇರೆ ಯಾವ ಕ್ಷೇತ್ರಗಳಿಗೂ ಇಲ್ಲ ಕ್ರೀಡೆಯಿಂದ ನಾವು ಶಿಸ್ತು ಸೇರಿದಂತೆ ಹಲವು ವಿ?ಯಗಳನ್ನು ಕಲಿಯಬಹುದು ಓದಿನ ಜೊತೆಗೆ ಕ್ರೀಡೆಗಳಲ್ಲೂ ಭಾಗವಹಿಸುವ ಮೂಲಕ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬಹುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಡಾ. ಹೆಚ್.ಪಿ. ಮಂಜುಳ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಶಿವಕುಮಾರ್ ನಿರೂಪಿಸಿದರು. ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸತೀಶ್ ಶಾಸ್ತ್ರಿ ಉಪಸ್ಥಿತಿರಿದ್ದರು.
National Sports Day