ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯಕಟ್ಟೆಗೆ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೇ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿರಂಜನ್(೪೭), ಚೆನ್ನಮ್ಮ(೬೭) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಢಿಕ್ಕಿಯಾಗಿದೆ.
ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಘಟನೆಯನ್ನು ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Road car accident – two dead