ಚಿಕ್ಕಮಗಳೂರು: ಕ್ರೀಡೆಯಿಂದ ಮಕ್ಕಳಲ್ಲಿ ದೈಹಿಕ ಸದೃಢತೆ, ಮಾನಸಿಕ ಏಕಾಗ್ರತೆ ಹೆಚ್ಚುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ.
ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಇಂದು ನಡೆದ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ಕ್ರೀಡೆಯಿಂದ ಶಾಶ್ವತ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಶದಲ್ಲಿ ಕ್ರೀಡಾರಂಗ ದೈಹಿಕ ಆರೋಗ್ಯ ಸದೃಢತೆ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೀರ್ತಿಗಳಿಸಲು ಸೂಕ್ತ ವೇದಿಕೆಯಾಗಿದೆ ಎಂದರು
ಕ್ರೀಡಾಪಟುಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ತೀರ್ಪುಗಾರರು ತಾರತಮ್ಯ ತೋರದೆ ಪಾರದರ್ಶಕ ತೀರ್ಪು ನೀಡಬೇಕು. ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಿ ಸ್ವಾಮಿ ವಿವೇಕನಂದರು ಹೇಳಿರುವಂತೆ ಪ್ರತಿಯೊಬ್ಬರು ಆತ್ಮ ವಿಜಯನನ್ನು ಸಂಧಿಸಬೇಕು ನಿಮ್ಮನ್ನು ನೀವು ಮೊದಲು ಗೆಲ್ಲಿ ಎಂಬುದನ್ನು ಅರಿಯಬೇಕು ಎಂದು ಹೇಳಿದರು.
ನಗರದ ಎಲ್ಲ ಇಲಾಖೆಗಳಲ್ಲಿ ಜನ ಸ್ನೇಹಿ ಆಡಳಿತದ ಸೇವೆ ಸಾರ್ವಜನಿಕರಿಗೆ ದೊರಕಿಸಲು ಪ್ರಯತ್ನ ಮಾಡುವುದಾಗಿ ಹಾಗೂ ನಗರ ಟ್ರಾಫಿಕ್ ಸಮಸ್ಯೆ, ರಜಾದಿನಗಳಲ್ಲಿ ಪ್ರವಾಸಿಗರು ಹೆಚ್ಚುತ್ತಿರುವುದರಿಂದ ಆಗುವ ತೋಂದರೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವನ್ನು ಪಡೆಯಬಹುದು ಎಂದು ಹೇಳಿದರು. ದೈಹಿಕ ಶಿಕ್ಷಣ ಪರಿವೀಕ್ಷಕ, ಜ್ಞಾನ ಮೂರ್ತಿ, ಪರಮೇಶ್ವರಪ್ಪ, ಮಂಜುನಾಥ, ಉಮಾ ಮಹೇಶ್ವರಪ್ಪ, ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಮಂಜುಳ ಹುಲ್ಲಹಳ್ಳಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ದೇವೇಂದ್ರ ಮತ್ತಿರರು ವೇದಿಕೆಯಲ್ಲಿದ್ದರು. ಪ್ರಾಂಶುಪಾಲ ಸತೀಶ್ ಶಾಸ್ತ್ರಿ ಸ್ವಾಗತಿಸಿ ಡಾ. ಹೆಚ್.ಎಸ್. ಸತ್ಯನಾರಾಯಣ ವಂದಿಸಿದರು.
District level sports meet for pre-graduation college students