ALSO FEATURED IN

ನಗರದಲ್ಲಿ ಶ್ರೀರಾಮ ಸೇನೆ ಜಿಲ್ಲಾ ಮುಖಂಡರ ಪ್ರತಿಭಟನೆ

Spread the love

ಚಿಕ್ಕಮಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಭಾಷಣ ಆರೋಪದಡಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಶ್ರೀರಾಮ ಸೇನೆ ಜಿಲ್ಲಾ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜೈಶ್ರೀರಾಮ್ ಎಂಬ ಘೋಷಣೆ ಕೂಗುತ್ತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮ ಸೇನೆ ವಿಭಾಗೀಯ ಅಧ್ಯಕ್ಷ ರಂಜಿತ್ ಶೆಟ್ಟಿ ಮಾತನಾಡಿ, ಪ್ರಮೋದ್ ಮುತಾಲಿಕ್ ಅವರು ಹಿಂದುತ್ವದ ಹೆಸರಿನಲ್ಲಿ ಹಿಂದೂ ಸಮಾಜಕ್ಕಾಗಿ ನಿರಂತರ ಹೋರಾಟ ಮಾಡಿಕೊಂಡು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ. ಇಂತಹ ಎಷ್ಟೇ ಪ್ರಕರಣ ದಾಖಲಾದರೂ ಶ್ರೀರಾಮ ಸೇನೆ ಕಾರ್ಯಕರ್ತರು ಜಗ್ಗುವುದಿಲ್ಲ ಹಿಂದೂ ಧರ್ಮದ ಪರ ಹೋರಾಟ ಮುಂದುವರಿಯಲಿದೆ ಎಂದರು.

ರಾಜ್ಯದಲ್ಲಿ ಹಿಂದೂ ಸಮಾಜಕ್ಕೆ ಶ್ರಮಿಸುವ ನಾಯಕರನ್ನು ಗುರಿಯಾಗಿಸಿ ಮಟ್ಟಹಾಕುವ ಕೆಲಸವಾಗುತ್ತಿದೆ. ಆಸೆ, ಆಮಿಷವೊಡ್ಡಿ ಪ್ರಕರಣ ದಾಖಲಿಸಿ ಅವರನ್ನು ತುಳಿಯುವ ಕೆಲಸವಾಗುತ್ತಿದೆ. ಸರ್ಕಾರದ ಈ ಧೋರಣೆ ಖಂಡನೀಯ ಇದನ್ನು ಖಂಡಿಸಿ ರಾಜ್ಯಾದ್ಯಂತ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆಗಳು ಆರಂಭವಾಗಿವೆ ಎಂದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಿಂದೂವಿರೋಧಿ ಆಡಳಿತ ಅನುಸರಿಸುತ್ತಿರುವ ಸರ್ಕಾರಕ್ಕೆ ಹಿಂದೂ ಸಮಾಜ ಹಾಗೂ ರಾಜ್ಯದ ಜನತೆ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜ್ಞಾನೇಂದ್ರ ಜೈನ್‌, ದುರ್ಗಾಸೇನಾ ಜಿಲ್ಲಾ ಘಟಕದ ಅಧ್ಯಕ್ಷೆ ನವೀನಾ, ಸಂಘಟನಾ ಕಾರ್ಯದರ್ಶಿ ಶರತ್‌, ತಾಲ್ಲೂಕು ಘಟಕದ ಅಧ್ಯಕ್ಷ ನಂದನ್, ರಾಜೇಂದ್ರ ಶರ್ಮ, ಪ್ರಜ್ವಲ್‌, ಯಶವಂತ್ ಇದ್ದರು.

Sri Ram Sena district leaders protest in the city

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version