ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಶೆಟ್ಟಿಬಣ) ನಗರದ ಆಜಾದ್ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ನಾಗವಾರ ರಮೇಶ್ ಮಳೆ ಕೊರತೆಯಿಂದ ರಾಜ್ಯದಲ್ಲಿ ಜನತೆಗೆ ತೀವ್ರ ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವಾಗಲೇ ರಾಜ್ಯಸರ್ಕಾರ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುತ್ತಿರುವುದು ಸೂಕ್ತವಲ್ಲ. ಕೂಡಲೇ ನೀರು ತಡೆಹಿಡಿಯಬೇಕು ಎಂದರು
ರಾಜ್ಯದಲ್ಲಿ ೧೯೨ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕಾವೇರಿ ಕಣಿವೆ ಭಾಗ ದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ ದಿನ ೫ ಟಿಎಂಸಿಯ? ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿ ಎಂದು ಹೇಳಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಪ್ರಾಧಿಕಾರದ ಆದೇಶ ಮುಖ್ಯವಲ್ಲ. ಈಗಲೂ ಸರ್ಕಾರ ಸ್ಪ? ನಿರ್ಧಾರ ಕೈಗೊ ಳ್ಳಬೇಕು. ರಾಜ್ಯದ ಎಲ್ಲ ಸಂಸದರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.
ರಾಜ್ಯದಲ್ಲಿ ನೀರಿನ ಕೊರತೆಯಿಂದ ರೈತರು ಸಂಕಷ್ಟದಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತಲೆದೂರುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ನಿಲುವು ಸರಿಯಲ್ಲ. ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಉಪಾಧ್ಯಕ್ಷ ಹರಿಕೃಷ್ಣ, ಕಡೂರು ತಾಲ್ಲೂಕು ಅಧ್ಯಕ್ಷ ಸತೀಶ್, ಉಪಾಧ್ಯಕ್ಷ ಬಾಲು, ಯುವಘಟಕದ ಅಧ್ಯಕ್ಷ ಇಮ್ರಾನ್, ಕಾರ್ಯದರ್ಶಿ ರವಿನಾಯ್ಕ್, ಸಂಘಟನಾ ಕಾರ್ಯದರ್ಶಿ ನಾಗರಾಜ್, ಸಂಚಾಲಕ ಪರಮೇಶ್, ಪದಾಧಿಕಾರಿಗಳಾದ ಗೋವಿಂದ, ಭರತ್, ಗೋವಿಂದಪ್ಪ, ಗಂಗಾಧರ್ ಮತ್ತಿತರರು ಹಾಜರಿದ್ದರು.
Karaway protests against the draining of Cauvery water