ALSO FEATURED IN

ಗಂಗಾಮತಸ್ಥರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Spread the love

ಚಿಕ್ಕಮಗಳೂರು: ಜಿಲ್ಲಾ ಗಂಗಾಮತಸ್ಥರ ಸಂಘ, ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಗಂಗಾಮತಸ್ಥರ ಸಂಘಗಳ ಸಂಯುಕ್ತಾಶ್ರಯದಲ್ಲಿ ಅ.೧ ರಂದು ಕಡೂರು ಶ್ರೀ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಎಂ.ಬಿ.ಬಿ.ಎಸ್, ಪಿಯುಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ನಿವೃತ್ತ ನೌಕರರುಗಳಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ಸಂಘದ ಅಧ್ಯಕ್ಷ ಕೆ.ಎಂ ಧನಂಜಯ ಅಂದು ಸಮಾಜದ ೪೦ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ೧೦ ಜನ ನಿವೃತ್ತ ನೌಕರರು, ಎಂ.ಬಿ.ಬಿ.ಎಸ್ ದಂತ ವೈದ್ಯ ವ್ಯಾಸಂಗ ಮುಕ್ತಾಯ ಮಾಡಿರುವ ತಲಾ ಒಬ್ಬರನ್ನುಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದರು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸೀಪುರ ಜಗದ್ಗುರು ಶ್ರೀ ಶಾಂತಭೀ?ಚೌಡಯ್ಯ ಮಹಾಸ್ವಾಮಿಗಳು ವಹಿಸಲಿದ್ದು, ಶಾಸಕ ಕೆ.ಎಸ್ ಆನಂದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸುವರು ಎಂದು ತಿಳಿಸಿದರು.

ರಾಜ್ಯ ಗಂಗಾಮತಸ್ಥರ ಸಂಘದ ಅಧ್ಯಕ್ಷ ಡಾ|| ಬಿ.ಮೌಲಾಲಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸುವರು. ಎಂ.ಶ್ರೀನಿವಾಸ್ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸುವರು. ಸಂಘದ ರಾಜ್ಯ ಉಪಾಧ್ಯಕ್ಷ ಪ್ರೊ. ಡಾ.ಸತ್ಯನಾರಾಯಣ ನಿವೃತ್ತ ನೌಕರರನ್ನು ಸನ್ಮಾನಿಸಲಿದ್ದಾರೆ ಎಂದರು.

ಸಿ.ಟಿ ಅಶೋಕ್, ಟಿ.ಕೃ?ಯ್ಯ, ನಾಗರಾಜ್ ಮಣ್ಣೂರು, ರಾಜು.ಜೆ, ಹೌದು ಎಂ.ಟಿ ಹನುಮಂತಯ್ಯ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಜಿ.ಪುಟ್ಟಪ್ಪ, ತಾಲೂಕು ಅಧ್ಯಕ್ಷ ಎಂ.ಪಿ ಗೋಪಾಲ್, ಪ್ರಧಾನ ಕಾರ್ಯದರ್ಶಿ ಎನ್.ಎ ರಾಕೇಶ್, ಶಿವಾನಂದ, ಕಿಟ್ಟಪ್ಪ ಉಪಸ್ಥಿತರಿದ್ದರು.

Pratibha Puraskar at Sangamutashraya of Gangamatstha Sanghas

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version