ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಿಂದ ಪ್ರತಿಕೃತಿ ಹಿಡಿದು ಪ್ರತಿಭಟನೆ ಆರಂಭವಾಗುತ್ತಿದ್ದಂತೆ ಎಚ್ಚೆತ್ತೊಂಡ ಪೊಲೀಸರು ಪ್ರತಿಕೃತಿಗಳನ್ನು ಕಸಿದುಕೊಳ್ಳಲು ಮುಂದಾದಾರು, ಈ ವೇಳೆ ಪರಸ್ಪರ ಎಳೆದಾಡಿಕೊಂಡರು. ಕೊನೆಗೆಗೂ ಬಿಜೆಪಿ ಕಾರ್ಯಕರ್ತರು ಪ್ರತಿಕೃತಿಗಳನ್ನು ಸುಟ್ಟು ಘೋಷಣೆಗಳನ್ನು ಕೂಗಿದರು.
ಬೆಳಗಿನಿಂದಲೇ ಬಿತ್ತಿಪತ್ರಗಳನ್ನು ಹಿಡಿದುಬೈಕ್ ರ್ಯಾಲಿ ನಡೆಸಿದ ಕಾರ್ಯಕರ್ತರು ಕೈಮುಗಿದು ಅಂಗಡಿಗಳನ್ನ ಬಾಗಿಲು ಹಾಕಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂದ್ ಗೆ ಸಹಕರಿಸುವಂತೆ ಮನವಿ ಮಾಡಿದರು. ಭ್ರಷ್ಟ ಸರ್ಕಾರ ಕಾಂಗ್ರೆಸ್ ಸರ್ಕಾರ, ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ನಂತರ ಆಜಾದ್ ಪಾರ್ಕ್ಸರ್ಕಲ್ನಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ದೇವರಾಜ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿಗಳು ಕಾಟಾಚಾರಕ್ಕೆ ವಿಪಕ್ಷಗಳ ಸಭೆ ಕರೆದು ಕಾವೇರಿ ವಿಚಾರದಲ್ಲಿ ತಾವು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿದರು.
ತಮಿಳುನಾಡಿನ ಮೇಲೆನ ಪ್ರೀತಿಗೆ ಹಾಗೂ ಐಎನ್ಡಿಐಎ ಗುಂಪಿನಲ್ಲಿರುವ ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರಕ್ಕೆ ಸಹಾಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು೭ ಆರೋಪಿಸಿದರು.
ರಾಜ್ಯದ ರೈತರು ವಿಷ ಕುಡಿಯುವ ಸ್ಥತಿಗೆ ತಂದಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಕರೆಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದರು.
ನಗರ ಬಿಜೆಪಿ ಅಧ್ಯಕ್ಷ ಮುಧುಕುಮಾರ್ ರಾಜ್ ಅರಸ್ ಮಾತನಾಡಿ, ಕನಾಟಕ ಸರ್ಕಾರ ರಾಜ್ಯದ ರೈತರ ಹಿತ ಬಲಿಕೊಟ್ಟು ರಾಜಾರೋಷವಾಗಿ ತಮಿಳುನಾಡಿಗೆ ನೀರು ಹರಿಸುತ್ತಿದೆ. ಈ ಬಾರಿ ಕಾವೇರಿ ನಿಗಮವು ೮ ಬಾರಿ ಸಭೆ ನಡೆಸಿದರು ಪ್ರಭಲವಾಗಿ ಹಕ್ಕೊತ್ತಾಯ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರಾಜ್ಯವನ್ನು ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ರೈತರ ಜೀವನದ ಜೊತೆ ಚಲ್ಲಾಟವಾಡುತ್ತಿದೆ. ಐಎನ್ಡಿಐಎ ಗುಂಪು ಕಟ್ಟಿಕೊಂಡು ಅದನ್ನು ತೃಪ್ತಿಪಡಿಸಲು ರಾಜ್ಯಕ್ಕೆ ಅನ್ಯಾಯ ಮಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಮಾದ್ಯಮ ವಕ್ತಾರರಾದ ಕವಿತಾಶೇಖರ್ ಮಾತನಾಡಿ ಕರ್ನಾಟಕ ಸಕಾರ ಮನೆಗೆ ಮಾರಿ ಊರಿಗೆ ಉಪಕಾರಿ ಎನ್ನುವ ರೀತಿ ನಡೆದುಕೊಳ್ಳುತ್ತಿದೆ. ನಮ್ಮ ರಾಜ್ಯದ ರೈತರು, ಬೆಂಗಳೂರಿನ ಜನತೆಗೆ ನೀರಿಲ್ಲದ ಸ್ಥಿತಿ ಇದೆ. ಆದರೂ ತಮಿಳು ನಾಡಿಗೆ ಬೆಳೆ ಬೆಳೆಯಲು ನೀರು ಬಿಡುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರೂಪಕುಮಾರ್, ಸುಜಾತಶಿವಕುಮಾರ್, ಮುಖಂಡರುಗಳಾದ ಕೆ.ಪಿ.ವೆಂಕಟೇಶ್, ಹಿರೇಮಗಳೂರು ಪುಟ್ಟಸ್ವಾಮಿ, ಅಂಕಿತ, ಜೀವನ್ರಂಗನಾಥ್, ನಾರಾಯಣಸ್ವಾಮಿ ಇತರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
BJP workers outraged by burning the effigy