ಚಿಕ್ಕಮಗಳೂರು: ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ ಘೋಷಣೆಯೊಂದಿಗೆ ಇಂದು ಭಾರತ ಕಮ್ಯುನಿಸ್ಟ್ ಪಕ್ಷ ತಾಲ್ಲೂಕಿನ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಠಾವಧಿ ಮುಷ್ಕರವನ್ನು ಆರಂಭಿಸಿತು.
ಅಜಾದ್ ಪಾರ್ಕ್ ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋ?ಣೆ ಕೂಗಿ ತಾಲೂಕಿನ ಗ್ರಾಮೀಣ ಭಾಗದಿಂದ ನಿವೇಶನ ರಹಿತ ಮಹಿಳೆಯರು ಆಗಮಿಸಿ ಈ ಅನಿರ್ಧಿಷ್ಠಾವತಿ ಮು?ರದಲ್ಲಿ ಪಾಲ್ಗೊಂಡಿರುವುದು ಇದೇ ಪ್ರಥಮ.
ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳಿಗೆ ನಿವೇಶನ ಇಲ್ಲದೆ ಇರುವುದರಿಂದ ವಸತಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಸರ್ಕಾರ ಕೂಡಲೇ ಅರ್ಹ ನಿವೇಶನ ರಹಿತರಿಗೆ ನಿವೇಶನ ನೀಡಲು ಮುಂದಾಗಬೇಕು. ಸರ್ಕಾರವೇ ಘೋಷಿಸಿದಂತೆ ರಾಜ್ಯದ ಎಲ್ಲಾ ಎಸ್.ಸಿ ಎಸ್.ಟಿ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಖಾಯ್ದೆ ಎ.ಪಿ.ಎಂ.ಸಿ ಖಾಯ್ದೆಗಳನ್ನು ರದ್ದುಗೊಳಿಸಬೇಕು ಹಾಗೂ ರೈತರ ಮೇಲೆ ದಾಖಲಾಗಿರುವ ರಾಜಕೀಯ ಪ್ರೇರಿತ ಮುಕದ್ದಮೆಗಳನ್ನು ವಾಪಸ್ಸು ಪಡೆಯಬೇಕು ಎಂದಿದ್ದಾರೆ.
ರಾಜ್ಯದಲ್ಲಿನ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸರ್ಕಾರವೇ ನೇರವಾಗಿ ಸಂಬಳ ಪಾವತಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಬೇಕು ಹಲವಾರು ವ?ಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ನೌಕರರನ್ನು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಜಾರಿಗೊಳಿಸಿರುವ ಮಾದರಿಯಲ್ಲಿ ಖಾಯಂ ಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರವೇ ಘೋಷಿಸಿದಂತೆ ೬ನೇ ಗ್ಯಾರಂಟಿಯಲ್ಲಿ ಅಸಂಘಟಿತ ಕಾರ್ಮಿಕರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ೧೫ ಸಾವಿರ, ಆಶಾ ಕಾರ್ಯಕತೆಯರಿಗೆ ೮ ಸಾವಿರ ಬಿಸಿಯೂಟ ಕಾರ್ಯಕರ್ತೆರಿಗೆ ೬ ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್ ರಾಧಾ ಸುಂದರೇಶ್ ತಾಲೂಕು ಕಾರ್ಯದರ್ಶಿ ರಮೇಶ್ ಕೆರೆಮಕ್ಕಿ ಮತ್ತಿತರರು ವಹಿಸಿದ್ದರು.
Strike by Communist Party of India demanding land