May 20, 2024

ಬುದ್ಧನ ದೀಕ್ಷಾಭೂಮಿ ಯಾತ್ರೆ ಪ್ರತಿಯೊಬ್ಬರಿಗೂ ಸ್ಪೂರ್ತಿ

0
ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆ ಕಾರ್ಯಕ್ರಮ

ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆ ಕಾರ್ಯಕ್ರಮ

ಚಿಕ್ಕಮಗಳೂರು:  ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ತೆರಳುವವರು ಕೇವಲ ಭೇಟಿ ನೀಡಿ ವಾಪಸಾದರೆ ಸಾಲದು. ಅಲ್ಲಿರುವ ಆದರ್ಶಗಳನ್ನು ಪ್ರತಿಯೊಬ್ಬರಲ್ಲೂ ತಿಳಿಸುವ ಕೆಲಸ ಮಾಡಿದರೆ ಪ್ರವಾಸಕ್ಕೆ ನಿಜವಾದ ಅರ್ಥ ಮೂಡಲು ಸಾಧ್ಯ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಾಲ್ಕು ದಿನಗಳ ಕಾಲ ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಏರ್ಪಡಿಸಿದ್ದ ಪ್ರವಾಸಕ್ಕೆ ಭಾನುವಾರ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ಅಪರೂಪದ ಪ್ರವಾಸ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ. ಇದರಿಂದ ಜನರು ಬುದ್ಧನ ಜೀವನ ಚರಿತ್ರೆಯನ್ನು ತಿಳಿಯಲು ಸಾಧ್ಯವಾಗಲಿದೆ. ಮುದ್ದನ ನಾಡಿಗೆ ಪ್ರವಾಸ ತೆರಳು ವವರು ಬುದ್ಧನ ವಿಚಾರಧಾರೆ ಮತ್ತು ಹಾಕಿಕೊಟ್ಟ ದಾರಿಯಲ್ಲಿಯೇ ಸಾಗಬೇಕು ಎಂದು ತಿಳಿಸಿದರು.

ಗೌತಮ ಬುದ್ಧನ ತತ್ವಗಳನ್ನು ಅಳವಡಿಸಿಕೊಳ್ಳುವ ಕೆಲಸ ಪ್ರತಿಯೊಬ್ಬರು ಮಾಡಬೇಕು. ನಿದ್ದೆಯಿಂದ ಎದ್ದ ವನೇ ಬುದ್ಧ, ಅತಿ ಜಾಗೃತ ಮನಸ್ಸಿನವ, ಜ್ಞಾನಿ ಹಾಗೂ ಬೇರೆಯವರಿಗೆ ನೋವುಂಟು ಮಾಡದವರು ತಮ್ಮ ಇಡೀ ಬದುಕನ್ನು ಸಮಾಜಕ್ಕೆ ಮುಡುಪಾಗಿಟ್ಟವರ ಮಾರ್ಗದರ್ಶನದ ಹಾದಿಯಲ್ಲಿ ಇಂದಿನ ಜನತೆ ಮುಂದುವರೆಯ ಬೇಕು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಪ್ರವಾಸದಿಂದ ಜ್ಞಾನಾರ್ಜನೆ ಮಾಡಿಕೊಂಡು ಬುದ್ಧನ ವಿಚಾರಧಾರೆ ಪಸರಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು. ಜೊತೆಗೆ ನೀವುಗಳೇ ಬುದ್ಧನ ಕುರಿತಾದ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಮಾತನಾಡಿ ನಾಗಪುರಕ್ಕೆ ಜಿಲ್ಲೆಯಿಂದ ನಾಲ್ಕು ಬಸ್‌ಗಳಲ್ಲಿ ೧೬೦ ಮಂದಿ ಪ್ರಯಾಣ ಆರಂಭಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನಿಂದಲೇ ಎರಡು ಬಸ್, ಮೂಡಿಗೆರೆ ಒಂದು ಬಸ್ ಹಾಗೂ ಕೊಪ್ಪ, ಶೃಂಗೇರಿ, ಕಡೂರು, ಅಜ್ಜಂಪುರ, ನರಾಪುರ ಭಾಗದಿಂದ ಒಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಜೊತೆಗೆ ಪ್ರವಾಸಕ್ಕೆ ಹೋಗುವವರೊಂದಿಗೆ ಓರ್ವ ನೋಡಲ್ ಅಧಿಕಾರಿಯನ್ನೂ ನಿಯೋ ಜನೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಡಿ.ರೇವಣ್ಣ, ದಲಿತ ಮುಖಂಡ ರಾದ ಮರ್ಲೆ ಅಣ್ಣಯ್ಯ, ಆಲ್ದೂರ್ ನವರಾಜ್, ಆಲ್ದೂರ್ ಗಣೇಶ್, ಯಲಗುಡಿಗೆ ಹೊನ್ನಪ್ಪ ಮತ್ತಿತರರು ಹಾಜರಿದ್ದರು.

Ambedkar Deeksha Bhoomi Yatra program in Nagpur

About Author

Leave a Reply

Your email address will not be published. Required fields are marked *