ALSO FEATURED IN

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಿ

Spread the love

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತುರ್ತಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಎಂದು ಶಾಸಕ ಹೆಚ್. ಡಿ ತಮ್ಮಯ್ಯ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಚಿಕ್ಕಮಗಳೂರು ವಿಧಾನ ಸಭಾ ವ್ಯಾಪ್ತಿಯಲ್ಲಿನ ಬರಗಾಲ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನ ೦೮ ಹೋಬಳಿಗಳು ೪೭ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿ ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳ ಮಾಹಿತಿ ಪಡೆದು ಜನ-ಜಾನುವಾರುಗಳಿಗೆ ಆಹಾರ, ಕುಡಿಯುವ ನೀರು, ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಹೋಬಳಿಗಳಿಗೆ ನೇಮಕವಾಗಿರುವ ನೋಡಲ್ ಅಧಿಕಾರಿಗಳು ಆಯಾಯ ಹೋಬಳಿವಾರು ಸಭೆಗಳನ್ನು ಮಾಡಿ ಅಲ್ಲಿನ ಜನಪ್ರತಿನಿದಿಗಳೊಂದಿಗೆ ಸಭೆ ನಡೆಸಿ ಮೇಲಾಧಿಕಾರಿಗಳಿಗೆ ಸಮಸ್ಯೆಗಳನ್ನು ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು.

ಚಿಕ್ಕಮಗಳೂರು ಕಸಬ, ಲಕ್ಯಾ, ಹೋಬಳಿಗಳಲ್ಲಿ ಹೆಚ್ಚಿನ ಬರ ಕಂಡು ಬರುವ ಪ್ರದೇಶಗಳಲ್ಲಿ ಜಾಗೃತಿ ವಹಿಸಿ ಎಲ್ಲ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಮೇವು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಕೃಷಿ, ತೋಟಗಾರಿಕೆ ಬೆಳೆಗಳ ನಷ್ಟ ಅಂದಾಜು ಮಾಡಿ ಬೆಳೆ ವಿಮೆಯನ್ನು ರೈತರಿಗೆ ಸಕಾಲದಲ್ಲಿ ಸಿಗುವಂತೆ ನೋಡಿಕೊಳ್ಳಬೇಕು. ನಮ್ಮ ಜಿಲ್ಲೆಯಿಂದ ಬೇರೆಡೆಗೆ ಮೇವನ್ನು ಸಾಗಿಸುವುದನ್ನು ತಡೆಯಬೇಕು, ಕುಡಿಯುವ ನೀರಿನ ಅಭಾವ ಇರುವ ಕಡೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಕುಡಿಯುವ ನೀರಿಗೆ ವಿದ್ಯುತ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ, ಶಾಲಾ ಕಾಲೇಜು, ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಸಂಬಂಧಪಟ್ಟವರು ನಿಗಾ ವಹಿಸಬೇಕು. ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು.

ತಹಶೀಲ್ದಾರ್ ಡಾ. ಸುಮಂತ್ ಅವರು ಕಂದಾಯ ಇಲಾಖೆ ಹಾಗೂ ಇತರೆ ಅಧಿಕಾರಿಗಳು ಬರಗಾಲ ಇರುವುದರಿಂದ ಎಲ್ಲ ಅಧಿಕಾರಿಗಳು ಸಮನ್ವತೆಯಿಂದ ಕೇಂದ್ರ ಸ್ಥಾನ ಸ್ಥಾನದಲ್ಲಿದ್ದು ಸಾರ್ವಜನಿಕರಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಇ. ಓ ತಾರಾನಾಥ್ ಸ್ವಾಗತಿಸಿ ವಂದಿಸಿದರು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮತ್ತಿತರ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

A meeting related to drought management in Chikkamagaluru Vidhan Sabha jurisdiction

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version