ಚಿಕ್ಕಮಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕನ್ನಡದ ಕಂಪು ಹರಡಲು ಚಿಕ್ಕಮಗಳೂರು ತಾಲ್ಲೂಕು ೪ನೇಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.೯ ರಂದು ಜಾಗರ ಹೋಬಳಿ ಸಿರವಾಸೆ ಸಮೀಪದ ಗಾಳಿಗುಡ್ಡೆ ಗ್ರಾಮದಲ್ಲಿ ನೆಡಸಲು ಉದ್ದೇಶಿಸಿಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಜಿಲ್ಲಾ ಕ.ಸಾ.ಪ ಮಾರ್ಗದರ್ಶನದೊಂದಿಗೆ ಜಾಗರ ಹೋಬಳಿ ಕಸಬಾ ಘಟಕದ ಸಹಯೋಗದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಸಮ್ಮೇಳನದ ಅಂಗವಾಗಿ ಬೆಳಗ್ಗೆ ಧ್ವಜಾರೋಹಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ವಿವಿಧ ಜಾನಪದ ಕಲಾ ತಂಡಗಳ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.
ಸಮ್ಮೇಳನದಂದು ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ತಲ್ಲಣಗಳ ಬಗ್ಗೆ ಎರಡು ಗೋಷ್ಠಿಗಳು ಹಾಗೂ ಬಹಿರಂಗ ಅಧಿವೇಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಇದೇ ಸಂದರ್ಭದಲ್ಲಿ ಸ್ಥಳೀಯ ಸಹಭಾಗಿತ್ವದಲ್ಲಿ ನಿರ್ಮಿಸಲಾಗಿರುವ ನಟ ಪುನೀತ್ ರಾಜ್ಕುಮಾರ್ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲಾಗುವುದೆಂದು ತಿಳಿಸಿದರು.
ಈ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು, ಸ್ಥಳಿಯ ಪ್ರತಿ ನಿಧಿಗಳು ಭಾಗವಹಿಸಲಿದ್ದು, ಚಿಕ್ಕಮಗಳೂರಿನ ಇಬ್ಬರು ಸಾಧಕರಿಗೆ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ತಾಲ್ಲೂಕಿನ ನಗರ ಘಟಕ ಮತ್ತು ಪ್ರತಿ ಹೋಬಳಿ ಘಟಕಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಗುರುತಿಸಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.
ಯುವ ಬರಹಗಾರರನ್ನು ಪ್ರೋತ್ಸಾಹಿಸಲು ಕವಿಗೋಷ್ಠಿಯನ್ನು ಏರ್ಪಡಿಸಲಾಗುವುದು ಸಮ್ಮೇಳನದ ಸವಿನೆನಪಿಗಾಗಿ ಪ್ರಾಯೋಜಕರ ನೆರವಿನಿಂದ ಸ್ಮರಣ ಸಂಚಿಕೆಯನ್ನು ಹೊರತರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ಭಾಗವಹಿಸುವ ತಾಲ್ಲೂಕಿನ ಸರ್ಕಾರಿ ನೌಕರರಿಗೆ ಜಿಲ್ಲಾಡಳಿತದ ಅನುಮತಿ ಪಡೆದು ಓಓಡಿ ಸೌಲಭ್ಯವನ್ನು ಕಲ್ಪಿಸಲಾಗುವುದು ಅದೇ ದಿನ ಸಂಜೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್ , ಸ್ವಾಗತ ಸಮಿತಿ ಅಧ್ಯಕ್ಷ ಕಳವಾಸೆ ರವಿ, ಕ.ಸಾ.ಪ.ಪ್ರಧಾನ ಸಂಚಾಲಕ ಇಮ್ರಾನ್ ಉಪಸ್ಥಿತರಿದ್ದರು.
Kannada Sahitya Sammelna of Taluk 4 on Feb. 9 at Chatigudde village