ALSO FEATURED IN

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಿ ನುಡಿದಂತೆ ನಡೆದ ಸರ್ಕಾರ

Spread the love

ಚಿಕ್ಕಮಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬ ಹಗ್ಗಳಿಕೆಗೆ ಪಾತ್ರವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.

ಅವರು ಇಂದು ನಗರದ ೨೬ ನೇ ವಾರ್ಡಿನಲ್ಲಿ ೧೧೯.೮೦ ಲಕ್ಷ ರೂ ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಸಂಕ್ರಾಂತಿ ದಿನದಂದು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿಯೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ ಅವರು ನಗರೋತ್ತಾನದಲ್ಲಿ ೧೮ ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಹಣ ಮಂಜೂರಾಗಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸಿಲ್ಲ ಎಂದು ವಿಷಾಧಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ನಗರೋತ್ತಾನದಿಂದ ಕೈಗೊಳ್ಳುವ ಈ ಕಾಮಗಾರಿ ಪ್ರಾರಂಭವಾದ ಬಳಿಕ ಅಮೃತ್ ಯೋಜನೆ ಮತ್ತು ಒಳ ಚರಂಡಿ ಕಾಮಗಾರಿ ನಡೆದ ಸಂದರ್ಭದಲ್ಲಿ ರಸ್ತೆಗಳನ್ನು ಅಗೆದು ಹಾನಿ ಮಾಡಿದ್ದು, ಈ ಎಲ್ಲಾ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.

ಜ.೨೨ ರಿಂದ ೨೩ ರವರೆಗೆ ನಗರದ ವಾರ್ಡ್‌ಗಳನ್ನು ಪ್ರದಕ್ಷಿಣೆ ಹಾಕಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದೇ ಸಂದರ್ಭದಲ್ಲಿ ಜನ ಸಂಪರ್ಕ ಸಭೆ ನಡೆಸುವ ಮೂಲಕ ಜನಸ್ನೇಹಿ ಆಡಳಿತ ಮತ್ತು ಜನಪರ ಸೇವೆಗಳಿಗೆ ಬದ್ದವಾಗಿರುವುದಾಗಿ ಭರವಸೆ ನೀಡಿದರು.

೫ ಗ್ಯಾರಂಟಿಗಳ ಪೈಕಿ ಕೊನೆ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.೧೨ ರಂದು ಮುಖ್ಯಮಂತ್ರಿಗಳು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿದ್ದು, ಅದೇ ದಿನ ಕಡೂರು ವಿಧಾನಸಭಾ ಕ್ಷೇತ್ರದ ಯುವಕ ಪ್ರತಾಪ್ ಎಂಬುವವರಿಗೆ ಇದರ ಸೌಲಭ್ಯ ನೀಡಿದ್ದೇವೆಂದು ಹೇಳಿದರು.

ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಅಧಿಕಾರಕ್ಕೆ ಬಂದ ೨೨ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ತಮ್ಮದೇ ಆದ ವಾರ್ಡ್ ನಂ ೨೬ ನ್ನು ಇದರಿಂದ ಹೊರತಾಗಿತ್ತು. ಕಾರಣ ಏನೆಂದರೆ ಅಧ್ಯಕ್ಷರು ತಮ್ಮ ವಾರ್ಡ್ ಅಭಿವೃದ್ಧಿಗೆ ನಗರಸಭೆ ಹಣ ವ್ಯಯ ಮಾಡುತ್ತಾರೆಂಬ ರಾಜಕೀಯ ಆರೋಪಗಳಿಗೆ ಉತ್ತರವಾಗಿ ಇಂದು ಗುದ್ದಲಿ ಪೂಜೆ ಮಾಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಾರ್ಡ್ ನಿವಾಸಿ ಏಕಾಂತ್‌ರಾಮು, ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

Guddali Puja for various development works in the 26th ward of the city

Facebook
X
WhatsApp
Telegram
Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

Spread the love

ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ…

Spread the love

ಚಿಕ್ಕಮಗಳೂರು: ಕವಿತೆಗಳು ಮಾನಸಿಕವಾಗಿ ಒಂದು ಅನುಭವ ಶೋಧಕ್ಕೆ ದಾರಿ ತೆರೆದು ಕೊಡುತ್ತವೆ; ಹಾಗೆಯೇ ಅವು ಹೃದಯದಲ್ಲಿ ವೈವಿಧ್ಯತೆಯ ಭಾವನೆಗಳನ್ನು ಮೀಟುತ್ತಾ…

Spread the love

ಚಿಕ್ಕಮಗಳೂರು: ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಜ್ಯದ ಕಾಫಿ ಬೆಳೆಯುವ ಪ್ರದೇಶದ ಸಂಸದರು ಒಟ್ಟಿಗೆ ಸೇರಿ ದೆಹಲಿಯಲ್ಲಿ ಸರ್ಫೇಸಿ ಕಾಯ್ದೆಯನ್ನು ಕಾಫಿ…

[t4b-ticker]
Exit mobile version