ಚಿಕ್ಕಮಗಳೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮೂಲಕ ತಮ್ಮ ಮುಂದಿನ ಜೀವನವನ್ನು ಉತ್ತಮಪಡಿಸಿಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಗೋಪಾಲಕೃಷ್ಣ ಹೇಳಿದರು.
ಅವರು ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ೨೦೨೩-೨೪ನೇ ಸಾಲಿನಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ಭವಿಷ್ಯದ ವಿದ್ಯಾಭ್ಯಾಸ ಮತ್ತು ಉದ್ಯೋಗ ಮಾರ್ಗದರ್ಶನ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸರ್ಕಾರಗಳು ಪೂರಕವಾಗಿ ಶ್ರಮ ಹಾಕುತ್ತಿವೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉದ್ಯೋಗ ಪಡೆದು ಉತ್ತಮವಾದ ಜೀವನ ನಡೆಸುವಂತೆ ಸಲಹೆ ನೀಡಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಬರುವ ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಅದರಲ್ಲಿ ಬರುವ ಪರೀಕ್ಷಾ ವಿಧಾನಗಳು ಹಾಗೂ ಉದ್ಯೋಗ ಮಾಹಿತಿಯ ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು, ಜನರಿಗೆ ಉಪಯುಕ್ತವಾಗಿವೆ ಎಂಬ ಬಗ್ಗೆ ನೀವು ಅರ್ಥ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದಾಗ ಆರ್ಥಿಕ ಸದೃಢರಾಗಬಹುದು ಎಂದರು.
ಅಪರ ಜಿಲ್ಲಾಧಿಕಾರಿ ಕನಕರಡ್ಡಿ ನಾರಾಯಣ ರಡ್ಡಿ ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ಮಾಹಿತಿ ನೀಡುವ ಈ ಕಾರ್ಯಕ್ರಮ ಪ್ರಶಾಂತನೀಯ ಹಿಂದೆ ವ್ಯಾಸಂಗ ಮಾಡಿದವರಿಗೆ ಈ ರೀತಿಯ ಸೌಲಭ್ಯಗಳು ಇರಲಿಲ್ಲ. ಇಂದು ಮಾರ್ಗದರ್ಶನ ನೀಡಲು ಸಂಸ್ಥೆ ಮುಖ್ಯಸ್ಥರೇ ನಿಮ್ಮ ಮುಂದೆ ಇದ್ದಾರೆ ಎಂದ ಅವರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆ ಮಾರ್ಗದರ್ಶನ ಸಂಸ್ಥೆ ಮುಖ್ಯಸ್ಥರಾದ ಶ್ರೀನಿವಾಸ್ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಸಲಹೆ ನೀಡಿದರು. ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್, ಅಭಿ?ಕ್ ಉಪಸ್ಥಿತರಿದ್ದರು.
A guide for students for competitive exams and future education and employment