ಚಿಕ್ಕಮಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆ, ಜನರಿಗೆ ಉದ್ಯೋಗ ಹಾಗೂ ಬಾಳಿಕೆ ಬರುವ ಆಸ್ತಿಗಳನ್ನು ಸೃಜನೆ ಮಾಡುವ ಉದ್ದೇಶದಿಂದ ನರೇಗಾ ದಿವಸವನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ ಹೇಳಿದರು.
ತಾಲ್ಲೂಕಿನ ಹಿರೇಗೌಜ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ದಿ ಸಂಬಂಧ ಕೆರೆಯ ಬಳಿ ನರೇಗಾ ದಿವಸ್ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿಯ ಮಹತ್ತರವಾದ ಯೋಜನೆಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯು ಒಂದಾಗಿದೆ. ಈ ವ? ಬರದ ಪರಿಸ್ಥಿತಿ ಇರುವುದರಿಂದ ನಮ್ಮ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಉತ್ತ ಮ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದರು.
ಜಿಲ್ಲೆಗೆ ನೀಡಿರುವ ಮಾನವ ದಿನಗಳ ಗುರಿಗೆ ಶೇ.೯೮% ರ? ಪ್ರಗತಿಯನ್ನು ಸಾಧಿಸಲಾಗಿದೆ. ಹೀರೆಗೌಜ ಗ್ರಾಮ ಪಂಚಾಯಿತಿಯು ನರೇಗಾ ಯೋಜನೆಯನ್ನು ಉತ್ತಮವಾಗಿ ಅನು?ನಗೊಳಿಸಿರುವ ಜೊತೆಗೆ ಅಭಿವೃದ್ಧಿ ಪಡಿಸುತ್ತಿರುವ ಕೆರೆಯ ಬಳಿ ನರೇಗಾ ದಿನವನ್ನು ಆಚರಿಸುತ್ತಿರುವುದು ಖುಷಿಯ ವಿಚಾರ ಎಂದು ತಿಳಿಸಿದರು.
ಉಪ ಕಾರ್ಯದರ್ಶಿ ಅಥಿಕ್ ಪಾ? ಮಾತನಾಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖ್ಯ ಉದ್ದೇ ಶ ಗ್ರಾಮೀಣ ಪ್ರದೇಶದ ದುಡಿಯುವ ಕುಟುಂಬಗಳಿಗೆ ೧೦೦ ದಿನಗಳ ಕೆಲಸ ನೀಡುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆರೆ, ಕಾಲುವೆ, ಕಲ್ಯಾಣಿ, ಕೃಷಿ ಹೊಂಡ ಸೇರಿದಂತೆ ಜಲ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಚರಂ ಡಿ, ರಸ್ತೆ, ಅಂಗನವಾಡಿ ಕಟ್ಟಡ, ಶಾಲಾ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳ ಸರ್ವ ತೋ ಮುಖ ಅಭಿವೃದ್ಧಿಗಾಗಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಅನು?ನಗೊಳಿಸಲಾಗುತ್ತಿದೆ ಎಂದು ತಿಳಿ ಸಿದರು.
ಹಿರೇಗೌಜ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಮಾತನಾಡಿ ನರೇಗಾ ಯೋಜನೆಯು ೨೦೦೬ ರಿಂದ ಅನು?ನ ಮಾಡಲಾಗುತ್ತಿದೆ. ನರೇಗಾ ದಿನದ ಮುಖ್ಯ ಉದ್ದೇಶ ನರೇಗಾ ಯೋಜನೆಯಡಿ ಕಾರ್ಯನಿರ್ವ ಹಿಸುವವರನ್ನು ಗುರುತಿಸಿ ಸನ್ಮಾಸಿಸುವ ದಿನ. ಈ ದಿನ ಅವರಿಗೆ ಆರೋಗ್ಯ ತಪಾಸಣೆ ಹಾಗೂ ಗೌರವಿಸುವ ಕಾರ್ಯ ಕೈಗೊಂಡಿದೆ ಎಂದು ತಿಳಿಸಿದರು.
ಇದೇ ವೇಳೆ ಕೆರೆಯ ದಂಡೆಯ ಮೇಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿಗಳು ಸಸಿ ನೆಡಲಾಯಿತು. ಕಾಮಗಾರಿ ಸ್ಥಳದಲ್ಲಿ ನೆರೆದಿದ್ದ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಹಾಗೂ ೧೦೦ ದಿನಗಳ ಕೆಲಸ ನಿರ್ವಹಿಸಿದ ಕೂಲಿಕಾರರಿಗೆ ಸನ್ಮಾನವನ್ನು ನಡೆಸಿ, ಸಂವಾದವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಎಸ್.ಕೆ.ಪರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂ ಜುಳಾ, ಸದಸ್ಯರುಗಳಾದ ಹಾಲೆಗೌಡ, ಸುರೇಶ್, ಪು? ಶಾಂತಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್. ರಾಜ್ಕುಮಾರ್ ಹಾಗೂ ಇತರರು ಹಾಜರಿದ್ದರು.
Narega Divas in Hiregauja Gram Panchayat