July 27, 2024

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ನೀತಿ ಖಂಡಿಸಿ ಸಿಪಿಐ ಪ್ರತಿಭಟನೆ

0
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ನೀತಿ ಖಂಡಿಸಿ ಸಿಪಿಐ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ನೀತಿ ಖಂಡಿಸಿ ಸಿಪಿಐ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರವು ರಾಜ್ಯದ ಜತೆಗೆ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಿಪಿಐ ಜಿಲ್ಲಾ ಸಮಿತಿ ಮುಖಂಡರುಗಳು ಸೋಮವಾರ ಸಂಸದರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಬಳಿಕ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್.ರಾಧಾಸುಂದರೇಶ್ ಕೇಂದ್ರ ಸರ್ಕಾರ ಜಿಎಸ್‌ಟಿ, ತೆರಿಗೆ ಹಣ, ಅನುದಾನಗಳ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ೨೭ ಸಂಸದರ ಕಚೇರಿಗಳ ಎದುರು ಧರಣಿ ನಡೆಸಲಾಗುತ್ತಿದೆ ಎಂದರು.

ದೇಶವನ್ನು ಮುನ್ನೆಡೆಸುವ ಹಾಗೂ ರಾಜ್ಯಗಳನ್ನು ಸಬಲಗೊಳಿಸಲು ಭಾರತದ ಒಕ್ಕೂಟದ ವ್ಯವಸ್ಥೆಯೊಳ ಗಿರುವ ರಾಜ್ಯಗಳಿಂದ ಸಂಗ್ರಹವಾದ ವಸ್ತುಗಳ, ಆಸ್ತಿಗಳ, ವಾಹನಗಳ ಮೇಲಿನ ತೆರಿಗೆ, ಸೆಸ್ ಇತ್ಯಾದಿ ರೂಪದಲ್ಲಿ ಸಂಗ್ರಹಿಸುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗವನ್ನು ರಚಿಸ ಲಾಗಿದೆ ಎಂದರು.

ವಿವಿಧ ಮೂಲಗಳಿಂದ ಸಂಗ್ರಹವಾಗುವ ತೆರಿಗೆ ಹಣವನ್ನು ಆಯಾ ರಾಜ್ಯಗಳನ್ನು ಮತ್ತು ಜನತೆಯ ಬದುಕನ್ನು ಸಲೀಕರಣಗೊಳಿಸಲು ಸಮರ್ಪಕ ಹಾಗೂ ನ್ಯಾಯಯುತವಾಗಿ ಹಂಚಿಕೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.

ಕಳೆದ ಹಲವಾರು ವರ್ಷಗಳಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕಡಿತಗೊಳಿಸಿ ೪೫ ಸಾವಿರ ಕೋಟಿ ನಷ್ಟವಾ ಗಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳೇ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ತೆರಿ ಗೆ ಹಣ ಹಂಚಿಕೆಯಲ್ಲಿ ಎಸಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವಂತೆ ಒತ್ತಾಯಿಸಿ ರಾಜ್ಯದ ಪಾಲಿನ ತೆರಿಗೆ ಹಣ ಸೇರಿದಂತೆ ನೆಲ, ಜಲ ಹಾಗೂ ಭಾಷೆಯ ಅಸ್ಮಿತೆಯ ಪ್ರಶ್ನೆಗಳು ಬಂದಾಗ ಧ್ವನಿ ಎತ್ತದೇ ಮೌನವಹಿಸಿರುವ ಸಂಸ ದರ ನಿರ್ಲಕ್ಷ್ಯವನ್ನು ಖಂಡಿಸಿ ಹೋರಾಟ ನಡೆಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಕಾರ್ಯದರ್ಶಿ ಕೆಳಮಕ್ಕಿ ರಮೇಶ್, ಮುಖಂಡರುಗಳಾದ ಹಮೀದಾ ಬಾನು, ಶಾರದಾ, ತಂಪಿತಾ, ನಳೀನಾ, ಹೆಚ್.ಕೆ.ಸೋಮೇಗೌಡ, ಜರ್ನಿ ಲೋಬೋ, ಸುರೇಶ್, ನಾರಾಯಣ್ ಮತ್ತಿತರರು ಹಾಜರಿದ್ದರು.

CPI protests against the discriminatory policy of the central government to the state

 

About Author

Leave a Reply

Your email address will not be published. Required fields are marked *