April 16, 2024

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ

0
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ

ಚಿಕ್ಕಮಗಳೂರು: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕ ಲಾರ್ಡ್ ಬಾಡೆನ್ ಪೂವೆಲ್ ದಿನಾ ಚರಣೆ ಅಂಗವಾಗಿ ತಾಲ್ಲೂಕು ಕಚೇರಿ ಆವರಣದಲ್ಲಿ ಜಿಲ್ಲಾ ಘಟಕ ಏರ್ಪಡಿಸಿದ್ದ ನೂರಾರು ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಸುಮಂತ್ ಗುರುವಾರ ಚಾಲನೆ ನೀಡಿದರು.

ಜಾಥಾವು ನಗರದ ಎಂ.ಜಿ.ರಸ್ತೆ ಮೂಲಕ ಜಿಲ್ಲಾ ಆಟದ ಮೈದಾನದವರೆಗೆ ನಡೆಯಿತು.ಬಳಿಕ ಮಕ್ಕಳಿಗೆ ಧ್ವಜ ನಿರ್ಮಾಣ, ಕರವಸ್ತ್ರ ತಯಾರಿಕೆ, ಕಥೆ ಹೇಳುವ ಸ್ಪರ್ಧೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ಸುಮಾರು ೧೩ ಶಾಲೆಗಳಿಂದ ಸ್ಕೌಟ್ಸ್ & ಗೈಡ್ಸ್, ಕಪ್ಸ್ ಹಾಗೂ ಬುಲ್‌ಬುಲ್‌ನ ೪೩೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಆಯುಕ್ತ ಎಂ.ಎನ್. ಷಡಕ್ಷರಿ, ಗೈಡ್ಸ್ ಆಯುಕ್ತೆ ಮಮತ, ತರಬೇತಿ ಆಯುಕ್ತೆ ಸಂಧ್ಯಾರಾಣಿ, ಸಂಘಟನಾ ಆಯುಕ್ತ ಕಿರಣ್‌ಕುಮಾರ್, sಸ್ಥಳೀಯ ಸಂಸ್ಥೆ ಅಧ್ಯಕ್ಷ ನಂದಕುಮಾರ್ ಮತ್ತಿತರರು ಹಾಜರಿದ್ದರು.

Scouts and Guides Founder’s Day

About Author

Leave a Reply

Your email address will not be published. Required fields are marked *

You may have missed