ಚಿಕ್ಕಮಗಳೂರು: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿರುವ ೧೧,೪೪೦ ಕೋಟಿ ರೂ. ವಾಪಾಸ್ ಪಡೆದು ಬೇರೆ ಯೋಜನೆಗಳಿಗೆ ಉಪಯೋಗಿಸುತ್ತಿರುವ ಸರ್ಕಾರದ ಪರಿಶಿಷ್ಟ ಜಾತಿ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಪದಾಧಿಕಾರಿ ಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಆಜಾದ್‌ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋ ಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ಕೆ.ಪಿ.ವೆಂಕಟೇಶ್ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ೧೦ ತಿಂಗಳು ಆಗಿದೆ. ಒಂದಿಲ್ಲೊಂದು ತೊಂದರೆ ಯನ್ನು ದಲಿತ ಸಮುದಾಯಕ್ಕೆ ನೀಡುತ್ತಿದೆ. ದಲಿತರ ಹೆಸರು ಹೇಳಿಕೊಂಡು ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಸ್. ಎಸ್.ಮಲ್ಲಿಕಾರ್ಜುನ್ ಅವರು ದಲಿತ ಸಮುದಾಯದ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಡಿ.ಸುಧಾಕರ್ ಅವರು ದಲಿತರ ಆಸ್ತಿ ಕಿತ್ತು ಕೊಂಡು ದೌರ್ಜನ್ಯ ಮಾಡಿದರು. ರಾಜ್ಯ ಸರ್ಕಾರ ಇಬ್ಬರ ವಿರುದ್ಧ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ದೂರಿದರು.
ಟಿ.ರಾಜಶೇಖರ್ ಮಾತನಾಡಿ, ಅಂಬೇಡ್ಕರ್ ಹಾಗೂ ಅವರ ವಿಚಾರಗಳನ್ನು ವಿರೋಧಿಸುವ ಕಾಂಗ್ರೆಸ್ ಪಕ್ಷ ದಲಿತ ವಿರೋಧಿ ನಿಲುವನ್ನು ಮುಂದೂವರೆಸಿದೆ. ಸಮುದಾಯಕ್ಕೆ ಸಲ್ಲಬೇಕಾದ ೧೧,೪೪೦ ಕೋಟಿ ರೂ. ಸಮುದಾಯಕ್ಕೆ ನೀಡದಿದ್ದರೇ ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಹೇಳಿದರು.
ಮಧುಕುಮಾರ್ ರಾಜ್ ಅರಸ್ ಮಾತನಾಡಿ, ಉಚಿತ ಯೋಜನೆಗಳ ಆಸೆ ಹುಟ್ಟಿಸಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿಲ್ಲ. ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟಿರುವ ಅನುದಾನವನ್ನು ಹಿಂಪಡೆದು ಭಾಗ್ಯ ಯೋಜನೆಗಳಿಗೆ ವಿನಿಯೋಗಿಸುವ ಮೂಲಕ ಪರಿಶಿಷ್ಟ ಜಾತಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಇದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಮುಖಂಡರಾದ ಪುಷ್ಪರಾಜ್, ದಿನೇಶ್, ಈಶ್ವರಹಳ್ಳಿ ಮಹೇಶ್, ಹಿರೇಮಗಳೂರು ಪುಟ್ಟಸ್ವಾಮಿ, ನಾರಾಯಣಗೌಡ ಸೇರಿ ದಂತೆ ಅನೇಕರು ಇದ್ದರು.
Press conference of BJP Scheduled Caste Morcha office bearers