ALSO FEATURED IN

ಸಖರಾಯಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶ

Spread the love

ಸಖರಾಯಪಟ್ಟಣ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೊಡುವ ಮತಗಳು ಅರಾಜಕತೆ, ದೇಶದ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ಅಭದ್ರತೆ ಹಾಗೂ ಆಂತರಿಕ ಸುರಕ್ಷತೆಯ ಅಪಾಯಕ್ಕೆ ನಾಂದಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ಧುರೀಣ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.

ಅವರು ಗುರುವಾರ ಸಖರಾಯಪಟ್ಟಣದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಹಣದ ಬಲ, ಅಧಿಕಾರ ಬಲ, ತೋಳ್ಬಲ, ಹೆಂಡದ ಬಲ, ಜಾತಿ ವಿಷಬೀಜ ಬಿತ್ತಿ ಓಟು ಪಡೆಯುವ ಕಾಲವಿತ್ತು. ಆದರೆ ಜನ ಇಂದು ಜಾಗೃತರಾಗಿದ್ದಾರೆ. ಸರಿ, ತಪ್ಪು ತಿಳಿದುಕೊಳ್ಳುವ ಶಕ್ತಿ ಅವರಿಗಿದೆ. ಕಾಂಗ್ರೆಸಿಗರ ರಾಜಕೀಯ ದೊಂಬರಾಟವನ್ನು ನಂಬುವುದಿಲ್ಲ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದ ಭಾಗ್ಯಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಹೆಣ್ಣು ಮಕ್ಕಳಿಗೆ ೧೮ ವರ್ಷವಾದಾಗ ಲಕ್ಷಾಂತರ ರೂ. ಹಣ ಸಿಗುತ್ತಿತ್ತು. ಆ ಯೋಜನೆ ಎಲ್ಲಿಗೆ ಹೋಯಿತು. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ ೬ ಸಾವಿರೂ. ಜೊತೆಗೆ ರಾಜ್ಯ ಸರ್ಕಾರದಿಂದ ೪ ಸಾವಿರ ರೂ. ಕೊಡುತ್ತಿದ್ದೆವು. ಆ ಯೋಜನೆ ಏನಾಯಿತು. ಹಾಲು ಉತ್ಪಾದಕರಿಗೆ ಕೊಡುತ್ತಿದ್ದ ಪ್ರೋತ್ಸಾಹಧನ ನಿಲ್ಲಿಸಿದ್ದು ಯಾಕೆ? ಇದೆಲ್ಲವೂ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿರುವುದನ್ನು ತೋರುತ್ತದೆ ಎಂದು ಆರೋಪಿಸಿದರು.

ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧ ಹೇಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್-ಬಿಜೆಪಿ ಒಂದಾಗಿ ಮುಂಬರುವ ಚುನಾವಣೆಯಲ್ಲಿ ೨೮ ಕ್ಕೆ ೨೮ ಕ್ಷೇತ್ರವನ್ನೂ ಗೆದ್ದು ಮೋದಿ ಅವರಿಗೆ ಕೊಡುಗೆ ಕೊಡಬೇಕಿದೆ. ಅದಕ್ಕೆ ಎಲ್ಲರ ಆಶೀರ್ವಾದ ಬೇಕು. ನನಗೆ ೮೨ ವರ್ಷ ವಯಸ್ಸಾಗಿದೆ. ನನ್ನ ಕರ್ತವ್ಯ ನಿರ್ವಹಿಸಲು ಬಂದಿದ್ದೇನೆ. ಮುಂದಿನ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಎಲ್ಲರೂ ಒಟ್ಟಾಗಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ರೈತರ ಬೆಳೆ ಸಂಪೂರ್ಣ ಹಾನಿಯಾಗಿದೆ. ಇಂದು ಭೀಕರ ಬರಗಾಲ ನಮ್ಮನ್ನು ಕಾಡುತ್ತಿದೆ. ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ ಆದರೂ ಕಾಂಗ್ರೆಸ್ ಸರ್ಕಾರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದರು.

ಇಡೀ ಪ್ರಪಂಚ ಈಗ ಭಾರತ ಹಾಗೂ ನರೇಂದ್ರ ಮೋದಿ ಅವರ ಕಡೆ ನೋಡುತ್ತಿದೆ. ಇಡೀ ವಿಶ್ವದ ಎಲ್ಲರ ಅಪೇಕ್ಷೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವದಾಗಿದೆ. ಕಳೆದ ೧೦ ವರ್ಷದಲ್ಲಿ ನರೇಂದ್ರ ಮೋದಿ ಅವರು ಒಂದು ದಿನ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ. ಅವರ ತಾಯಿ ನಿಧನರಾದಾಗ ಶವ ಸಂಸ್ಕಾರ ನಡೆದ ತಕ್ಷಣ ಬಂದು ಕರ್ತವ್ಯದಲ್ಲಿ ತೊಡಗಿದ ಮಹಾನ್ ವ್ಯಕ್ತಿ ಅವರಾಗಿದ್ದಾರೆ. ಇಂತಹ ವ್ಯಕ್ತಿಯನ್ನು ಹೊಂದಿರುವುದು ನಮ್ಮ ಸೌಭಾಗ್ಯ ಎಂದರು.

ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸುಮಾರು ೩ ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲು ಜನ ತೀರ್ಮಾನ ಮಾಡಿದ್ದಾರೆ. ಪರಿಷತ್ತಿನಲ್ಲಿ ಮಾತನಾಡುವಾಗ ಇಡೀ ಸದನ ಗಮನ ಹರಿಸುವಂತ ವ್ಯಕ್ತಿ ಕೋಟಾ ಶ್ರೀನಿವಾಸ ಪೂಜಾರಿ ಆಗಿದ್ದಾರೆ. ಲೋಕಸಭೆಯಲ್ಲೂ ಅವರು ನಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಶಕ್ತಿ ಅವರಲ್ಲಿದೆ. ಅವರಿಗೆ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕು ಎಂದು ಕರೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಬರುವ ಚುನಾವಣೆ ಸಾಮಾನ್ಯದ್ದಲ್ಲ. ಭಾರತ ದೇಶದ ಭವಿಷ್ಯ ಬರೆಯುವಂತಹದ್ದು, ಇಡೀ ಪ್ರಪಂಚದಲ್ಲಿ ದೇಶ ದೇಶಗಳ ನಡುವೆ ಯುದ್ಧ, ಆಂತರಿಕ ಗಲಭೆ ನಡೆಯುತ್ತಿದೆ. ಬಲಾಢ್ಯ ದೇಶಗಳ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದೆ ಇಂತಹ ಸಂದರ್ಭದಲ್ಲಿ ನಮ್ಮ ದೇಶ ಎಲ್ಲ ವಿಚಾರದಲ್ಲಿ ಸದೃಢವಾಗಿರಲು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತಬೇಕಿದೆ. ಇದಕ್ಕಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಸಿ.ಟಿ.ರವಿ ಮಾತನಾಡಿ, ಕೆಲವು ಕಾಲ ಮೈಮರೆತು ಯಾರು ಕೆಲಸಗಾರ ಎಂದು ಯೋಚಿಸದ ಕಾರಣಕ್ಕೆ, ಯಾವ ಪಕ್ಷದ ಕಾಲ್ಗುಣ ಏನು ಎನ್ನುವುದನ್ನು ತಿಳಿದುಕೊಳ್ಳದ ಕಾರಣಕ್ಕೆ ಪಕ್ಷಿಗಳು ಕುಡಿಯಲು ನೀರಿಲ್ಲದ ಸ್ಥಿತಿ ಬಂದಿದೆ. ಕಾಂಗ್ರೆಸ್ ಗೆಲ್ಲಿಸಿದ ಕಾರಣಕ್ಕೆ ಅರಸನ ಕೂಳಿಗೆ ಹೋಗಿ ವರ್ಷದ ಕೂಳು ಕಳೆದುಕೊಂಡ ಸ್ಥಿತಿ ರಾಜ್ಯದ ಜನರದ್ದಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ನವರು ಅದು ಕೊಡುತ್ತಾರೆ, ಇದು ಕೊಡುತ್ತಾರೆ ಎಂದು ಆಸೆ ಬಿದ್ದಿರಿ, ಆದರೆ ಅವರ ಲೆಕ್ಕವನ್ನು ಮರೆತ ಕಾರಣಕ್ಕೆ ಈಗ ನಷ್ಟ ಅನುಭವಿಸುತ್ತಿದ್ದೀರಿ ಎಂದರು.

ಸಿ.ಟಿ.ರವಿಗೆ ಅವಕಾಶ ಸಿಗಲೇಬೇಕು

ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ ಎಂದು ಹೇಳುವ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ರವಿ ಅವರ ಸೋಲಿಗೆ ಯಡಿಯೂರಪ್ಪ ವಿಷಾಧಿಸಿದರು.
ವಿಧಾನ ಸಭೆಯಲ್ಲಿ ಗುಡುಗಬೇಕಾದ ರವಿ ಅವರು ಹೊರಗಿದ್ದಾರೆ. ಅವರಿಗೆ ಮುಂದೆ ಬರುವ ದಿನಗಳಲ್ಲಿ ವಿಧಾನಸಭೆ ಅಥವಾ ವಿಧಾನ ಪರಿಷತ್ತು ಎಲ್ಲಿಯಾದರೂ ಒಂದು ಅವಕಾಶ ಸಿಗಲೇಬೇಕು. ಅದಕ್ಕೆ ಎಲ್ಲ ರೀತಿಯ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದರು.

ಮುಖಂಡರುಗಳಾದ ಆರಗಾ ಜ್ಞಾನೇಂದ್ರ, ಭೈರತಿ ಬಸವರಾಜ್, ಡಿ.ಎನ್.ಜೀವರಾಜ್, ಮಾಜಿ ಶಾಸಕರುಗಳಾದ ಡಿ.ಎಸ್.ಸುರೇಶ್, ಬೆಳ್ಳಿ ಪ್ರಕಾಶ್, ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ, ಎಚ್.ಸಿ.ಕಲ್ಮರುಡಪ್ಪ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

A huge convention organized by BJP-JDS

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version