ALSO FEATURED IN

ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

Spread the love

ಚಿಕ್ಕಮಗಳೂರು:  ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ವ್ಯಾಪ್ತಿ ಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ. ಪರಿಸರ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಕೋರಿಕೆ ಮತ್ತು ಸಾರ್ವಜನಿಕರ ಅಭಿಪ್ರಾಯಗಳನ್ನು ಆಧರಿಸಿ ಈ ಆದೇಶ ಹೊರಡಿಸಲಾಗಿದೆ.

4.99 ಲೀಟರ್ ತನಕ ನೀರು ಸಂಗ್ರಹಿಸಬಹುದಾದ ಪ್ಲಾಸ್ಟಿಕ್ ಬಾಟಲಿ, ಗುಟ್ಕಾ, ಚಿಪ್ಸ್ ಮತ್ತು ಇತರ ತಿನಿಸಿಗಳ ಪ್ಯಾಕೇಟ್‌ಗಳನ್ನು ಗಿರಿ ಪ್ರದೇಶಕ್ಕೆ ಕೊಂಡೊಯ್ಯುವುದು ಮತ್ತು ಮಾರಾಟ ಮಾಡುವು ದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ ಐಪಿಸಿ 188 ಅಡಿಯಲ್ಲಿ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಅಲ್ಲಂಪುರ ಚೆಕ್‌ಪೋಸ್ಟ್‌ನಿಂದ ಮುಳ್ಳಯ್ಯನಗಿರಿಗೆ ಸಂಪರ್ಕಿಸುವ ಮಾರ್ಗದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಅಡಚಣೆಯಾಗದ ರೀತಿಯಲ್ಲಿ ಪ್ಲಾಸ್ಟಿಕ್ ತಪಾಸಣಾ ಚೆಕ್‌ಪೋಸ್ಟ್ ನಿರ್ವಹಿಸಬೇಕು. ಈ ಸಂಬಂಧ ಪ್ರತಿ ತಿಂಗಳು 5ರೊಳಗೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.

ಪ್ಲಾಸ್ಟಿಕ್ ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿನ ಎಲ್ಲ ಹೋಂಸ್ಟೇ, ರೆಸಾರ್ಟ್‌ ಗಳಲ್ಲಿ ಕಡ್ಡಾಯವಾಗಿ ಸೂಚನಾ ಫಲಕಗಳನ್ನು ಅಳಡಿಸಿಕೊಳ್ಳಬೇಕು. ವೈಜ್ಞಾನಿಕವಾಗಿ ಕಸ ವಿಂಗಡಿಸಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಕಾಲಕಾಲಕ್ಕೆ ಪರಿಶೀಲಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು

ಬಳಕೆಯಾಗದಂತೆ ಅನಿರೀಕ್ಷಿತ ತಪಾಸಣೆ ನಡೆಸಲು ತಂಡ ನಿಯೋಜಿಸಲು ವಾಣಿಜ್ಯ ಮತ್ತು ತೆರಿಗೆ ಇಲಾಖೆಗೂ ಸೂಚನೆ ನೀಡಿದ್ದಾರೆ.

ಆದೇಶ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದೆ ಎಂಬುದರ ಮೇಲುಸ್ತುವಾರಿ ವಹಿಸಿ ಆಗಾಗ ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಪ್ರತಿ ತಿಂಗಳು ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

Ban on use of plastic in Chandradrona mountain range including Mullaiyanagiri

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version