July 27, 2024
ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ

ಚಿಕ್ಕಮಗಳೂರು: ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು ಎಂದು ಸಂಘದ ಅಧ್ಯಕ್ಷ ದಿನೇಶ್‌ಗುಪ್ತ ತಿಳಿಸಿದರು.

ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು ವಾಸವಿ ಜಯಂತಿ ಅಂಗವಾಗಿ ಪ್ರತಿ ವರ್ಷ ಜನಪರವಾದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು ಇಂದು ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಸಂಘದ ವತಿಯಿಂದ ಹಣ್ಣು ಹಂಪಲು ವಿತರಣೆ, ಗ್ಲುಕೋಸ್ ವಿತರಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಎಂದರು.

ಎಂಜಿ ರಸ್ತೆ ವಾಸವಿ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕರಿಗಾಗಿ ಪ್ರಸಾದ, ಮಜ್ಜಿಗೆ, ಪಾನಕ ಕೋಸಂಬರಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಕ್ತನಿಧಿ ವೈದ್ಯ ಡಾ. ಮುರುಳೀಧರ್ ಮಾತನಾಡಿ ರಕ್ತದಾನ ಮಾಡುವುದರಿಂದ ಮತ್ತೊಬ್ಬರ ಜೀವವನ್ನು ಉಳಿಸಲು ಸಹಕಾರಿಯಾಗುತ್ತದೆ ಜೊತೆಗೆ ರಕ್ತದಾನ ಮಾಡಿದ ವ್ಯಕ್ತಿಯ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಹೇಳಿದರು.

ಅಪಘಾತ ಮತ್ತು ಹೆರಿಗೆ ಶಸ್ತ್ರ ಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ ರಕ್ತದಾನಿಗಳು ಮಾಡಿದ ಸಹಾಯ ತುಂಬಾ ಉಪಯುಕ್ತವಾಗಿರುತ್ತದೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಮಾನವೀಯತೆಯನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವಾಸವಿ ಯುವಜನ ಸಂಘದ ಪದಾಧಿಕಾರಿಗಳಾದ ಶ್ರೀನಿವಾಸ್, ಅನುಪಮ ದಿನೇಶ್‌ಗುಪ್ತ, ಅರವಿಂದ್, ಕಾವ್ಯ ಅರವಿಂದ್ ಮತ್ತಿತರರಿದ್ದರು.

Blood Donation Camp by Vasavi Yuva Jan Sangh

About Author

Leave a Reply

Your email address will not be published. Required fields are marked *