ALSO FEATURED IN

3ನೆಯ ಮೂರನೇ ಬಾರಿಗೆ ಕೆಕೆಆರ್ ಐಪಿಎಲ್ ಚಾಂಪಿಯನ್

Spread the love
ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ ಭಾನುವಾರ ನಡೆದ ಫೈನಲ್‌ನಲ್ಲಿ 2016ರ ಚಾಂಪಿಯನ್ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಕೋಲ್ಕತ್ತಾ, ಐಪಿಎಲ್ ಫೈನಲ್‌ನಲ್ಲಿ ಹೈದರಾಬಾದ್ ತಂಡವನ್ನು 18.3 ಓವರ್‌ಗಳಲ್ಲಿ 113 ರನ್‌ಗಳ ಕನಿಷ್ಠ ಸ್ಕೋರ್‌ಗೆ ಆಲೌಟ್ ಮಾಡಿ ನಂತರ 10.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 ರನ್ ಬಾರಿಸಿ ಪ್ರಶಸ್ತಿ ಗೆದ್ದುಕೊಂಡಿತು.

ಗುರ್ಬಾಜ್ ಮತ್ತು ಅಯ್ಯರ್ ಜೋಡಿಯು ಪವರ್‌ಪ್ಲೇ ಓವರ್‌ಗಳಲ್ಲಿ ತಂಡದ ಸ್ಕೋರ್ ಅನ್ನು ಒಂದು ವಿಕೆಟ್‌ಗೆ 72 ರನ್‌ಗಳಿಗೆ ಕೊಂಡೊಯ್ದರು. 32 ಎಸೆತಗಳಲ್ಲಿ 39 ರನ್ ಗಳಿಸಿದ ಗುರ್ಬಾಜ್ 9ನೇ ಓವರ್‌ನಲ್ಲಿ ಔಟಾದರು.

ಆದರೆ ಸ್ಕೋರ್‌ಬೋರ್ಡ್‌ನಲ್ಲಿ ಇಷ್ಟು ರನ್‌ಗಳು ದಾಖಲಾಗಿದ್ದರಿಂದ ಕೆಕೆಆರ್‌ನ ಗೆಲುವು ಖಚಿತವಾಗಿತ್ತು. ಅಂತಿಮವಾಗಿ, 11ನೇ ಓವರ್‌ನಲ್ಲಿ ಮೂರು ಸಿಂಗಲ್ಸ್‌ಗಳನ್ನು ತೆಗೆದುಕೊಳ್ಳುವ ಮೂಲಕ, KKR ಬ್ಯಾಟ್ಸ್‌ಮನ್‌ಗಳು 8 ವಿಕೆಟ್‌ಗಳಿಂದ ತಮ್ಮ ಗೆಲುವನ್ನು ಖಚಿತಪಡಿಸಿದರು.

3rd time KKR IPL champion

Facebook
X
WhatsApp
Telegram
Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

Spread the love

ಚಿಕ್ಕಮಗಳೂರು: ಅಜ್ಞಾನ ಅಹಂಕಾರ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿಯಾಗಿ ಬಾಳು ಬೆಳಗಿಸುವಾತನೇ ಗುರು ಎಂದು ಶಾರದ ಪೈ ಕಲ್ಯಾಣ ಮಂಟಪದ…

Spread the love

ಚಿಕ್ಕಮಗಳೂರು: ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು…

[t4b-ticker]
Exit mobile version