ಚಿಕ್ಕಮಗಳೂರು: ತಾಲೂಕಿನ ದಾಸರಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಮಾಲಾಶ್ರೀ ಕೆ.ಎಲ್ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರತೀಶ್ ತಿಳಿಸಿದರು.
ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಶಿವೇಗೌಡ ಕಳೆದ ೨೦ ವ?ಗಳಿಂದ ಈ ಗ್ರಾಮ ಪಂಚಾಯಿತಿ ಬಿಜೆಪಿ ಭದ್ರಕೋಟೆಯಾಗಿದ್ದು ಮಾಜಿ ಶಾಸಕ ಸಿ.ಟಿ ರವಿ ನೇತೃತ್ವದಲ್ಲಿ ಅಭಿವೃದ್ಧಿಯಾಗಿದೆ ಅದನ್ನು ಮುಂದುವರೆಸಲಿ ಎಂದು ಹಾರೈಸಿದರು.
ಬಡವರು, ದೀನದಲಿತರು, ಕೂಲಿ ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗುವ ರೀತಿ ಮಾದರಿಯಾದ ಗ್ರಾಮ ಪಂಚಾಯಿತಿ ಆಗಲಿ ಇದೊಂದು ದೇವಾಲಯ ಎಂಬ ಮನೋಭಾವದಿಂದ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ ಎಂದರು.
ಕೇಂದ್ರ ಸರ್ಕಾರದ ಯೋಜನೆಯ ಉದ್ಯೋಗ ಖಾತ್ರಿ ಯೋಜನೆಯಡಿ, ಗ್ರಾ.ಪಂ ನಲ್ಲಿ ೧೫ ನೇ ಹಣಕಾಸು ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ನೂತನ ಉಪಾಧ್ಯಕ್ಷರ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗೆ ಅಭಿನಂದಿಸಿದರು.
ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಲಾಶ್ರೀ ಮಾತನಾಡಿ, ದಾಸರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಚರಂಡಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎಲ್ಲ ಸದಸ್ಯರ ಸಹಕಾರ, ವಿಶ್ವಾಸ ಪಡೆದುಕೊಂಡು ಬದ್ಧನಾಗಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ, ಅರಳಗುಪ್ಪೆ ಕೈಮರ ಸೋಸೈಟಿಯ ಅಧ್ಯಕ್ಷರಾದ ಸತೀಶ್, ಸದಸ್ಯರಾದ ಶೃತಿಕೌಶಿಕ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಚಂದ್ರಶೇಖರ್, ಲಲಿತಾವಿನೋದ್, ಅವಿಲಾ, ಬೂತ್ ಅಧ್ಯಕ್ಷರಾದ ಚಂದ್ರಶೇಖರ್, ಕೌಶಿಕ್, ಆದರ್ಶ್ಕುಮಾರ್ ಉಪಸ್ಥಿತರಿದ್ದರು.
Malashree elected unopposed as Dasarahalli Gram Panchayat Vice President