ALSO FEATURED IN

ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಯ ಪುಣ್ಯ ಸ್ಮರಣಾರಾಧನೆ

Spread the love

ಚಿಕ್ಕಮಗಳೂರು:  ಮಠಮಾನ್ಯಗಳು ಮತ್ತು ಮಠಾಧೀಶರುಗಳ ಗಟ್ಟಿ ನಿಲುವಿನಿಂದಾಗಿ ದೇಶದಲ್ಲಿಂದು ಧರ್ಮ ಉಳಿದಿದೆ ಎಂದು ಶಾಸಕ ಎಚ್,ಡಿ,ತಮ್ಮಯ್ಯ ಹೇಳಿದರು.

ಕಡೂರು ತಾಲೂಕಿನ ಹುಲಿಕೆರೆಯ ದೊಡ್ಡ ಮಠದಲ್ಲಿ ಬುಧವಾರ ನಡೆದ ಲಿಂಗೈಕ್ಯ ಶ್ರೀ ಬಸವರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿಯವರ ಪುಣ್ಯ ಸ್ಮರಣಾರಾಧನೆ ಹಾಗೂ ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಪ್ರಥಮ ವರ್ಷದ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಮಠ ಮಾನ್ಯಗಳು ಮಠಾಧೀಶರುಗಳು ಸರ್ಕಾರಕ್ಕೆ ಸರಿಸಮನಾಗಿ ಶಾಲಾ ಕಾಲೇಜುಗಳನ್ನು ನಡೆಸುವ ಮೂಲಕ ವಿದ್ಯಾದಾನದ ಜೊತೆಗೆ ಅನ್ನದಾಸೋಹವನ್ನೂ ನಿರಂತರವಾಗಿ ಮಾಡುತ್ತಿವೆ, ಅದರ ಜೊತೆ ಜೊತೆಗೆ ಧರ್ಮ ಪ್ರಚಾರವನ್ನೂ ನಡೆಸುವ ಮೂಲಕ ನಮ್ಮ ಧರ್ಮವನ್ನು ಉಳಿಸುತ್ತಿವೆ ಎಂದು ತಿಳಿಸಿದರು.

ಫಲಾಹಾರ ಸ್ವಾಮಿ ಮಠದ ಶ್ರೀ ಮುರುಗೇಂದ್ರ ಸ್ವಾಮಿಜಿ ಮಾತನಾಡಿ ಮಠ ಮಂದಿರಗಳು ಧರ್ಮವನ್ನು ಬೆಳೆಸುವುದರ ಜೊತೆಗೆ ಸಮಾಜದಲ್ಲಿ ಭಾವೈಕ್ಯತೆಯನ್ನೂ ಮೂಡಿಸಿ ಜನರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಶ್ರೀ ಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ತಮ್ಮ ಗುರುಗಳ ಅಣತಿ ಮತ್ತು ಅಭಿಲಾಷೆಯಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಶ್ರೀ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಧರ್ಮವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ, ಹಾಗಾಗಿ ಎಲ್ಲರೂ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಕಿವಿ ಮಾತು ಹೇಳಿದರು.

ಸಮಾರಂಭಕ್ಕೆ ಮುನ್ನ ಕರ್ತೃ ಗದ್ದುಗೆಗೆ ಅಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು.

ಯಳನಾಡು ಮಠದ ಶ್ರೀ ಡಾ, ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು, ಕೆ ಬಿದರೆ ಮಠದ ಶ್ರೀ ಪ್ರಭು ಕುಮಾರ ಶಿವಾಚಾರ್ಯ ಸ್ವಾಮೀಜಿ, ಶಂಕರ ದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ರಂಭಾಪುರಿ ಬೀರೂರು ಶಾಖಾಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬೇರುಗಂಡಿ ಮಠದ ಶ್ರೀ ರೇಣುಕ ಮಹಂತ ಶಿವಾಚಾರ್ಯ ಸ್ವಾಮೀಜಿ, ಕರಡಿ ಗವಿಮಠದ ಶ್ರೀ ಶಿವಯೋಗಿ ಶಿವಶಂಕರ ಸ್ವಾಮೀಜಿ, ಹುಣಸಘಟ್ಟದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಕಾಂಗ್ರೆಸ್ ಮುಖಂಡರಾದ ಎಂ,ಎಲ್, ಮೂರ್ತಿ, ಮಹಡಿ ಮನೆ ಸತೀಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್,ಎಂ, ಲೋಕೇಶ್, ತಾಲೂಕು ಅಧ್ಯಕ್ಷ ಬಿ, ಎ, ಶಿವಶಂಕರ್, ತಾಲೂಕು ಬೇಡ ಜಂಗಮ ಸಮಾಜದ ಅಧ್ಯಕ್ಷ ಎ, ಎಸ್, ಎಸ್, ಆರಾಧ್ಯ ಉಪಸ್ಥಿತರಿದ್ದರು.
ಸಮಾರಂಭದ ನಡುವೆ ಅಂತರಾಷ್ಟ್ರೀಯ ಕಲಾವಿದರಾದ ಪಿ ನಿತ್ಯ ಮತ್ತು ಎಸ್ ಕೃತಿ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

Remembrance of Basavaraja Desikendra Shivacharya Swamiji

Facebook
X
WhatsApp
Telegram
Spread the love

ಚಿಕ್ಕಮಗಳೂರು: ಉಪ್ಪಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ಪೂರ್ಣಗೊಂಡ ನಂತರ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ…

Spread the love

ಚಿಕ್ಕಮಗಳೂರು: ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ ೨೭.೫ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ…

Spread the love

ಚಿಕ್ಕಮಗಳೂರು: ಉಪ್ಪಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡ ಪೂರ್ಣಗೊಂಡ ನಂತರ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿ ವರೆಗೆ ಉಚಿತ…

Spread the love

ಚಿಕ್ಕಮಗಳೂರು: ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ ೨೭.೫ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ…

[t4b-ticker]
Exit mobile version