ಚಿಕ್ಕಮಗಳೂರು: ಹವಾಮಾನ ವೈಪರೀತ್ಯದಿಂದ ವಾತಾವರಣ ಕಲುಷಿತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಜ್ಞಾನಾಗರೀಕರು ಮನೆಯಂಗಳದಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಹೇಳಿದರು.
ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ವಿಜಯಪುರ ಸಮೀಪ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪದಂತೆ ‘ತಾಯಿ ಗೊಂದು ಗಿಡ’ ನೆಡುವ ಕಾರ್ಯಕ್ರಮದಲ್ಲಿ ಭಾನುವಾರ ಮುಂಜಾನೆ ಪಾಲ್ಗೊಂಡು ಅವರು ಮಾತನಾಡಿದರು.
ಪರಿಸರಕ್ಕೆ ಪೂರಕವಾಗಿರುವ ತೆಂಗು, ಮಾವು, ನೇರಳೆ, ಹೊಂಗೆ ಸೇರಿದಂತೆ ವಿವಿಧ ತಳಿಗಳ ಸಸಿ ಗಳನ್ನು ಪೋಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಮುಂದಾಗಬೇಕು ಎಂದು ತಿಳಿಸಿದರು.
ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ನಿವಾಸಿಗಳು ಮನೆ ಗೊಂದು ಗಿಡ ನೆಡುವ ಕಾರ್ಯಕ್ಕೆ ಮುಂದಾದರೆ ದೇಶವು ಕಲ್ಪವೃಕ್ಷಗಳ ನಾಡಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಪೋಷಕರು ಮಕ್ಕಳ ಹಾಗೂ ದೇಶದ ಭವಿಷ್ಯದ ದೃಷ್ಟಿಯಿಂದ ಪರಿಸರದ ಕಾಳಜಿ ಮೂಡಿಸಿಕೊ ಳ್ಳಬೇಕು ಎಂದರು.
ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ ಮಾತನಾಡಿ ಪ್ರಧಾನ ಮಂತ್ರಿಗಳ ಆಶಯ ದಂತೆ ಗಿಡ ಕಾರ್ಯಕ್ರಮ ಹಮ್ಮಿಕೊಂಡಿರುವುದು ಖುಷಿಯ ಸಂಗತಿ. ಜೊತೆಗೆ ದೇಶಕ್ಕಾಗಿ ಜೀವನವನ್ನೇ ಮುಡಿಪಿಟ್ಟು ಜನಸಂಘ ಸ್ಥಾಪನೆಗೆ ಶ್ರಮಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಮುಖರ್ಜಿಯವರು ರಾಷ್ಟ್ರಕ್ಕಾಗಿ ಕೈಗೊಂಡಂತಹ ಕ್ರೀಯಾಶೀಲ ಕಾರ್ಯಗಳು, ಚಿಂತನೆಗಳು ಅವಿಸ್ಮರಣೀಯ. ದೇಶದ ಐಕ್ಯತೆಗಾಗಿ ಮುಖರ್ಜಿಯವರು ಬದುಕನ್ನು ಮುಡಿಪಿಟ್ಟವರು. ರಾಜಕೀಯ ಮುತ್ಸದ್ದಿ ಯಾವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂಬುದಕ್ಕೆ ಮಾದರಿಯಾಗಿದ್ದರು. ಇಂದಿನ ಯು ವಪೀಳಿಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಇಂದು ತಮ್ಮ ತಾಯಿಯ ಜೊತೆಗೂಡಿ ಸಸಿ ನೆಡಲಾಗಿದೆ ಎಂದ ಅವರು ದೂರದೃಷ್ಟಿಯ ಚಿಂತನೆ ಹೊಂದಿರುವ ಪ್ರಧಾನಿಗಳ ಕರೆಗೆ ನಿರ್ಲಕ್ಷ್ಯ ವಹಿಸದೇ ಪ್ರತಿಯೊಬ್ಬರು ಸಸಿನೆಟ್ಟು ಹೆತ್ತ ತಾಯಿಗೆ ಗೌರವ ಸಲ್ಲಿಸಬೇಕು ಎಂದರು.
ಇಂದಿನ ಜಾಗತೀಕ ತಾಪಮಾನ ಏರಿಕೆಯಿಂದ ಪರಿಸರವು ಯಥೆಚ್ಚವಾಗಿ ಮಲೀನವಾಗುತ್ತಿದೆ. ಇವು ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ನಾಗರೀಕರು ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಸೀತರಾಮಭರಣ್ಯ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚ್ಚಿನ್ಗೌಡ, ಕಾರ್ಯದರ್ಶಿ ಶಶಿ ಆಲ್ದೂರು, ನಗರ ಪ್ರಧಾನ ಕಾರ್ಯದರ್ಶಿ ಗೌತಮ್, ಉಪಾಧ್ಯಕ್ಷ ನವೀನ್ ಮತ್ತಿತರರು ಹಾಜರಿದ್ದರು.
Planting program of ‘Tai Gogu Gida’ by Distrct BJP Youth Morcha